ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದವರ ಮಾಹಿತಿ ನೀಡಿದರೆ ನಗದು ಬಹುಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಬಡವರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಜಾರಿಗೆ ತಂದಿರುವ ಬಿಪಿಎಲ್ ಕಾರ್ಡ್ ಹಾಗೂ ಅದರ ಪ್ರಯೋಜನ  ಉಳ್ಳವರ ಪಾಲಾಗುತ್ತಿದೆ. ಹಣವಂತರು ನಕಲಿ ದಾಖಲೆಗಳನ್ನು ನೀಡಿ 12 ಲಕ್ಷ ಬಿಪಿಎಲ್ ಕಾರ್ಡ್’ಗಳನ್ನು ಪಡೆದಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸರ್ಕಾರ ಇದರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.

ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಗಿಂತಲೂ ಹೆಚ್ಚು ಒಣ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶಗಳಲ್ಲಿ ಒಂದು ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು, ನಾಲ್ಕು ಚಕ್ರದ ವಾಹನ ಇರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.1.20 ಲಕ್ಷಕ್ಕಿಂತಲೂ ಹೆಚ್ಚಿರುವ ಕುಟುಂಬಗಳು ಅನಧಿಕೃತ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಇಲಾಖೆ ಮಾಹಿತಿ ಕಲೆ ಹಾಕಿದೆ.

 ಹೀಗಾಗಿ ಅನರ್ಹ ಬಿಪಿಎಲ್ ಕಾರ್ಡ್ ಪಡೆದಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವ ಇಲಾಖೆ, ಆರ್ಥಿಕವಾಗಿ ಸದೃಢರಾಗಿದ್ದು, ಬಿಪಿಎಲ್‌ ಕಾರ್ಡ್‌ ಹೊಂದಿರುವವರ ಮಾಹಿತಿ ನೀಡಿದರೆ ಅಂತಹವರಿಗೆ 400 ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಅಲ್ಲದೆ, ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರು ಮಾರ್ಚ್ ಅಂತ್ಯದೊಳಗಾಗಿ ಕಾರ್ಡ್’ಗಳನ್ನು ಮರಳಿಸುವಂತೆ ಕಾಲಾವಕಾಶವನ್ನೂ ನೀಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.