ಬೆಳ್ತಂಗಡಿ: ತಾಲ್ಲೂಕಿನ ತೋಟಗಾರಿಕೆ ಇಲಾಖೆ ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ವತಿಯಿಂದ ತಾಲ್ಲೂಕು ಪಂಚಾಯತ್ ಯೋಜನೆಯಡಿ ಪ.ಜಾತಿ ರೈತರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಮಡಂತ್ಯಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ತಾ ಪಂ. ಅಧ್ಯಕ್ಷರಾದ ದಿವ್ಯಜ್ಯೋತಿರವರು ಉದ್ಘಾಟಿಸಿದರು.
ಗ್ರಾ.ಪಂ. ಅಧ್ಯಕ್ಷರಾದ ಶಶಿಪ್ರಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ, ಕುಲಾಲ ತಾ.ಪಂ ಸದಸ್ಯೆ ವಸಂತಿ ಲಕ್ಷ್ಮಣ, ಮಡಂತ್ಯಾರು ಗ್ರಾ.ಪಂ ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ, ನೂತನ ಗ್ರಾ.ಪಂ ಸದಸ್ಯ ಹಾಗೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಹಾಗೂ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಡಾ. ರಮೇಶ್ ಟಿ ಜೆ, ಡಾ. ಕೇದಾರನಾಥ ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಸಂಜೀವ, ಮಲ್ಲಿನಾಥ ಬಿರಾದಾರ ಹಾಗೂ ಕೃಷಿ ಅಧಿಕಾರಿ ಚಿದಾನಂದ ಹೂಗಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.