ಉಜಿರೆ: ಉಜಿರೆ ಗ್ರಾ.ಪಂ ವ್ಯಾಪ್ತಿಯ ಬಡೆಕೊಟ್ಟು-ತಿಮರೋಡಿ ರಸ್ತೆಯು ತುಂಬಾ ಕಿರಿದಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯುಂಟಾಗುತ್ತಿತ್ತು. ಈ ಸಮಸ್ಯೆಯನ್ನು ಮನಗಂಡು ಕಳೆದ ಐದು ದಿನಗಳಿಂದ ಈ ರಸ್ತೆಯ ಇಕ್ಕೆಲಗಳಲ್ಲಿ ಕಣಿವೆ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ಸಾಗುತ್ತಿದೆ.
ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಗ್ರಾ.ಪಂ ಸದಸ್ಯ ಪ್ರೇಮ್ ಜೈಸನ್ ವೇಗಸ್ ಮತ್ತು ಮುಕೇಶ್ ತಿಮರೋಡಿಯವರ ಮುಂದಾಳತ್ವದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.