ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಳಂಜ ಗ್ರಾಮದ ಬಡ ಕುಟುಂಬಕ್ಕೆ ಆರ್ಥಿಕ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಳಂಜ ಬಿ ಒಕ್ಕೂಟದ ಶಾರದಾಂಬ ಸ್ವಸಹಾಯ ಸಂಘದ ಸದಸ್ಯೆ ಶ್ರೀಮತಿ ಗಾಯತ್ರಿಯವರು ಅನಾರೋಗ್ಯದಿಂದ ಬಳಲುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಇವರು, ತಮ್ಮ ಪುತ್ರ ತ್ರಿವನ್ ರವರ ವಿದ್ಯಾಭ್ಯಾಸ ಮುಂದುವರಿಸಲು ಸಹಾಯಧನ ಕೋರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ ಮನವಿ ನೀಡಿದ್ದರು.
ಇವರ ಮನವಿಗೆ ಸ್ಪಂದಿಸಿದ ಡಾ. ಹೆಗ್ಗಡೆಯವರು ಮಂಜೂರು ಮಾಡಿದ ರೂ.15ಸಾವಿರ ಸಹಾಯಧನದ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ವತಿಯಿಂದ ಗಾಯತ್ರಿಯವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ಜನ ಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಿಸ್, ಯೋಜನಾಧಿಕಾರಿ ಯಶವಂತ ಎಸ್, ಮೇಲ್ವಿಚಾರಕ ದಿನೇಶ್, ಬಳಂಜ ಗ್ರಾ.ಪಂ. ಸದಸ್ಯ ಯಶೋಧರ ಶೆಟ್ಟಿ, ತಂಡದ ಸದಸ್ಯ ಕೃಷ್ಣ ದೇವಾಡಿಗ, ಸೇವಾ ಪ್ರತಿನಿಧಿಗಳಾದ ಪ್ರಮೀಳಾ ಆಚಾರ್ಯ ಮತ್ತು ಸಂಜೀವ ಆಚಾರ್ಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.