75ನೇ ಸ್ವಾತಂತ್ರ್ಯೋತ್ಸವ ಆಚರಣೆ ಸಮಿತಿ ಸದಸ್ಯರಾಗಿ ಡಾ.ಡಿ ವೀರೇಂದ್ರ ಹೆಗ್ಗಡೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯನ್ನು ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಆಚರಿಸುವ ಪ್ರಯುಕ್ತ ಕೇಂದ್ರ ಸರ್ಕಾರ 259 ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರೂ ಈ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಸಮಿತಿಯ ಅಧ್ಯಕ್ಷ ಸ್ಥಾನವನ್ನು ವಹಿಸಲಿದ್ದಾರೆ. 259 ಸದಸ್ಯರಿರುವ ಈ ಸಮಿತಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಸುಪ್ರೀಂ ಸಿಜೆಐ ಎಸ್.ಎ.ಬೋಬ್ಡೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್, ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಕೇಂದ್ರ ಸಚಿವ ಸದಾನಂದ ಗೌಡ, ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ಡಾ.ಡಿ ವೀರೇಂದ್ರ ಹೆಗ್ಗಡೆ, ಪದ್ಮಶ್ರೀ ಪುರಸ್ಕೃತ ಬಿ.ಎಂ ಹೆಗ್ಡೆ, ಬ್ಯಾಂಕರ್ ಕೆ.ವಿ ಕಾಮತ್, ಬ್ಯಾಡ್ಮಿಂಟನ್ ಮಾಜಿ ಆಟಗಾರ ಪ್ರಕಾಶ್ ಪಡುಕೋಣೆ, ಕಲಾವಿದರಾದ ಲತಾ ಮಂಗೇಷ್ಕರ್, ಕ್ರಿಕೆಟ್ ಆಟಗಾರ ಸಚಿನ್ ತೆಂಡುಲ್ಕರ್ ಸೇರಿದಂತೆ 28 ರಾಜ್ಯಗಳ ಮುಖ್ಯ ಮಂತ್ರಿಗಳು, ಹಲವು ರಾಜ್ಯಪಾಲರು, ಹಲವು ವಿಪಕ್ಷ ನಾಯಕರು, ಕೇಂದ್ರ ಸಚಿವರು ಸದಸ್ಯರಾಗಿ ಆಯ್ಕೆಯಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.