ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಸ್ತಿತೆರಿಗೆಯಲ್ಲಿ ಪರಿಷ್ಕರಣೆ: ಸರಕಾರದ ಮಾರ್ಗಸೂಚಿಯಂತೆ ಜಾರಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಆಸ್ತಿತೆರಿಗೆ ಕಾಯ್ದೆಗಳಿಗೆ ತಿದ್ದುಪಡಿಯಾಗಿರುವಂತೆ 2021-22ನೇ ಸಾಲಿನಿಂದ ನಗರ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಆಸ್ತಿತೆರಿಗೆಯನ್ನು ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಪರಿಷ್ಕರಿಸಲಾಗುವುದು ಎಂದು ನ.ಪಂ ಮುಖ್ಯಾಧಿಕಾರಿ ಸುಧಾಕರ್ ತಿಳಿಸಿದರು.
ಮಾ.೬ರಂದು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಜಿಎಸ್‌ಡಿಪಿಯ ಶೇ.0.25 ಹೆಚ್ಚುವರಿ ಸಾಲವನ್ನು ಕೇಂದ್ರ ಸರ್ಕಾರದಿಂದ ಪಡೆಯುವ ನಿಟ್ಟಿನಲ್ಲಿ ಅರ್ಹರಾಗಲು ಆಸ್ತಿತೆರಿಗೆಯನ್ನು ಪರಿಷ್ಕರಿಸಲಾಗುವುದು. 2004-05ನೇ ಸಾಲಿಗೆ ಅನ್ವಯಿಸಿದಂತೆ ಶೇ.30ಹೆಚ್ಚಿಸಿಕೊಂಡು ಸಾರ್ವಜನಿಕರಿಗೆ ಹೊರೆಯಾಗದಂತೆ ವಿವಿಧ ವರ್ಗದ ನಗರ ಸ್ಥಳೀಯ ಸಂಸ್ಥೆಗಳ ಕೆಲವೊಂದು ಮಾದರಿ ಆಸ್ತಿಗಳಿಗೆ ಲೆಕ್ಕಾಚಾರ ಮಾಡಿ ತೆರಿಗೆ ನಿರ್ಧರಿಸಲಾಗುವುದು.
ಖಾಲಿ ನಿವೇಶನಕ್ಕೆ ಭೂಮಿಯ ಮೂಲ ಬೆಲೆಯ ಮೇಲೆ ಒಂದೇ ರೀತಿಯಾಗಿ ತೆರಿಗೆ ವಿಧಿಸಲು ಕನಿಷ್ಟ ಶೇ.0.2 ಗಿಂತ ಕಡಿಮೆ ಇಲ್ಲದಂತೆ ಗರಿಷ್ಟ 0.5 ಮೀರದಂತೆ ನಿಗದಿಪಡಿಸಲಾಗಿದೆ. ಅಲ್ಲದೆ ಕಟ್ಟಡಕ್ಕೆ ಹೊಂದಿಕೊಂಡಿರುವ 1000 ಚ.ಅಡಿಗಿಂತ ಹೆಚ್ಚಿನ ಅಳತೆಯ ಖಾಲಿ ನಿವೇಶನಗಳಿಗೆ ತೆರಿಗೆಯನ್ನು ವಿಧಿಸಲಾಗುವುದು ಎಂದರು.
ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ ಮಾತನಾಡಿ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆ ಬಗ್ಗೆ ವಿಶೇಷ ಗಮನ ಹರಿಸಲಾಗುವುದು. ಹೊರಗಿನಿಂದ ಬಂದು ತ್ಯಾಜ್ಯವನ್ನು ಎಸೆಯುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ನ.ಪಂ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಸ್ಥಾಯಿ ಸಮಿತಿ ಅಧ್ಯಕ್ಷೆ ತುಳಸಿ ಕರುಣಾಕರ್, ಪ.ಪಂ ಸದಸ್ಯರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.