ಫ್ರೆಂಡ್ಸ್ ಬೊಳ್ಳುಕಲ್ಲು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗೇರುಕಟ್ಟೆ : ಫ್ರೆಂಡ್ಸ್ ಬೊಳ್ಳುಕಲ್ಲು ಕಳಿಯ, ಗೇರುಕಟ್ಟೆ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರವು ಮಾ.6 ಬೊಳ್ಳುಕಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಬೊಳ್ಳುಕಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವಾನಂದ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಸನಬ್ಬ ಅಳಕೆದಡ್ಡ ಉದ್ಘಾಟಿಸಿ ಶುಭ ಹಾರೈಸಿದರು. ರಕ್ತದಾನ ಶಿಬಿರದಲ್ಲಿ ಸುಮಾರು 30 ಕ್ಕೂ ಹೆಚ್ಚು ಯುವಕರು ಉಚಿತ ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ರಕ್ತನಿಧಿಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ MJM ಅಧ್ಯಕ್ಷರಾದ ಖಾಸೀಂ ದರ್ಕಾಸು, ಗುತ್ತಿಗೆದಾರ ನಿಝಾಮುದ್ದೀನ್, ಶ್ರೀನಿವಾಸ ಬೆರ್ಕೆತ್ತೋಡಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಕಾರ್ಯ ನಿರ್ವಾಹಕರಾದ ರಝ್ವೀನ್ ಗುರುವಾಯನಕೆರೆ ಮತ್ತು ಯೂಸುಫ್ ಕೊಯ್ಯೂರು ಹಾಗೂ ಫ್ರೆಂಡ್ಸ್ ಬೊಳ್ಳುಕಲ್ಲು ಸಂಘದ ಪದಾಧಿಕಾರಿಗಳು ಮತ್ತು ಬ್ಲಡ್ ಹೆಲ್ಪ್ ಲೈನ್ ಸಿಬ್ಬಂದಿಗಳು, ನಿರ್ವಾಹಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.