ರೆಖ್ಯ: ಬೆಳ್ತಂಗಡಿ ರೋಟರಿ ಕ್ಲಬ್, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಮಂಗಳೂರು ರೋಟರಿ ಸೀ ಸೈಡ್, ರೆಖ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಎಂಜಿರ ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ ತರಕಾರಿ ಗಿಡಗಳ ವಿತರಣೆ ನಡೆಯಿತು.
ಹತ್ಯಡ್ಕ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಗ್ರಾಮಸ್ಥರಿಗೆ ತರಕಾರಿ ಗಿಡಗಳನ್ನು ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗ್ರಾ.ಪಂ ಮಾಜಿ ಸದಸ್ಯ ಉರ್ನಡ್ಕ ನಾರಾಯಣ ಗೌಡ, ಸಂಘದ ನಿರ್ದೇಶಕ ಬೇಬಿ ಕಿರಣ್, ರೆಖ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಯಶೋಧರ ಗೌಡ ಉಪಸ್ಥಿತರಿದ್ದರು. ರೋಟರಿ ಕ್ಲಬ್ ನ ಉದಯಶಂಕರ್ ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.