ಪಟ್ರಮೆ ಅನಾರು ಎಂಬಲ್ಲಿ ನಡೆದ ದುರ್ಘಟನೆ
ಪಟ್ರಮೆ: ಮರ ಕಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಡಿಗೆ ಬಿದ್ದು ಮೂವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಮಾ.9 ರಂದು ಮಧ್ಯಾಹ್ನ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಸಮೀಪದ ಕಾಯಿಲ ಎಂಬಲ್ಲಿರುವ ದೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಪಟ್ರಮೆ ಗ್ರಾಮದ ರಾಮಣ್ಣ ಕುಂಬಾರ ಎಂಬವರ ಪುತ್ರ ಪ್ರಶಾಂತ್(21),ಸೇಸಪ್ಪ ಪೂಜಾರಿಯವರ ಮಗ ಸ್ವಸ್ತಿಕ್ (23)ಮತ್ತು ಇನ್ನೋರ್ವ ಉಪ್ಪಿನಂಗಡಿ ನಿವಾಸಿ ಗಣೇಶ್(38) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅನಾರು ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ದೂಪದ ಮರವನ್ನು ಕಡಿದು ಉರುಳಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Really good news cowering