ಧರ್ಮಸ್ಥಳ ಗ್ರಾ.ಪಂ.: ಅಂತರಾಷ್ಟ್ರೀಯ ಮಹಿಳಾದಿನಾಚರಣೆ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1


ಧರ್ಮಸ್ಥಳ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಧರ್ಮಸ್ಥಳ, ಶ್ರೀ. ಧ.ಮ ಕಾಲೇಜು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಧರ್ಮಸ್ಥಳ ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಸ್ವ ಸಹಾಯ ಒಕ್ಕೂಟ  ಇದರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾದಿನಾಚರಣೆ ಮತ್ತು ಮಹಿಳಾ ಗ್ರಾಮ ಸಭೆ ಜರುಗಿತು.

ಮಾ.9 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಈ ಸಮಾರಂಭದ ಅಧ್ಯಕ್ಷತೆಯನ್ನ ಧರ್ಮಸ್ಥ ಗ್ರಾ.ಪಂ.ಅಧ್ಯಕ್ಷೆ ಜಯಾ ಮೋನಪ್ಪ ಗೌಡ ವಹಿಸಿದ್ದರು. ಕಾರ್ಯಕ್ರಮವನ್ನ ಧರ್ಮಸ್ಥಳ ಕೇತ್ರದ ತಾ.ಪಂ ಸದಸ್ಯೆ ಧನಲಕ್ಷ್ಮಿ ಜನಾರ್ಧನ ಉದ್ಘಾಟಿಸಿ ಶುಭ ಹಾರೈಸಿದರು.

ಬೆಳ್ತಂಗಡಿ ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಕಿ ಅಮ್ಮಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕಿ ವಾಣಿಶ್ರೀ, ಉಜಿರೆ ಶ್ರೀ ಧ.ಮ ಕಾಲೇಜು ಸ್ನಾತಕೊತ್ತರ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಡಾ. ಚಿತ್ರಾ , ಧರ್ಮಸ್ಥಳ ಪೋಲೀಸ್ ಠಾಣೆಯ ರವೀಂದ್ರ ಎಮ್, ಧರ್ಮಸ್ಥಳ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಸೀತಮ್ಮ ಭಾಗವಹಿಸಿ ಮಾಹಿತಿನೀಡಿ ಶುಭ ಹಾರೈಸಿದರು. ಇದೇ ವೇಳೆ ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಸಾಧನೆಗೈದ ಮಹಿಳೆಯರನ್ನ ಗುರುತಿಸಿ ಸನ್ಮಾನಿಸಲಾಯಿತು ಹಾಗೂ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸನ್ಮಾನಿತರು
ನಾಟೀವೈದ್ಯೆ ಜಾನಕಿ ಬರೆಮೇಬ,  ನಳಿನಿ ಮತ್ತು ರಾಹೆಲ್ ಪಿ.ಕೆ (ಯೋಧರ ತಾಯಿ)., ಸ್ವಚ್ಛತಾವಿಭಾಗದ ಉದ್ಯೋಗಿ ಅಕ್ಕುಕಿನ್ನಿಗ, ಸ್ವ ಉದ್ಯೋಗ ನಡೆಸುತ್ತಿರುವ ಸಂಧ್ಯಾ ಭಟ್ , ರೂಪಾ ಇವರುಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರು, ಗೊಂಚಲು ಸಮಿತಿಯ ಅಧ್ಯಕ್ಷೆ ಲೀಲಾವತಿ, ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ರಮ್ಯಾ ಮೇಲ್ವಿಚಾರಕಿ ಚಂದ್ರಾವತಿ ವೇದಿಕೆಯಲ್ಲಿ ಉಪಸ್ಥತರಿದ್ದರು.

ಧರ್ಮಸ್ಥ ಗ್ರಾ. ಪಂ. ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯತೆಯರು , ಶ್ರೀ. ಧ.ಮ ಕಾಲೇಜು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರು , ಗ್ರಾ. ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು  ಗ್ರಾ. ಪಂ. ಕಾರ್ಯದರ್ಶಿ ವೆಂಕಪ್ಪ ಗೌಡ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಸದಸ್ಯೆ ಲಕ್ಷ್ಮಿ ಸನ್ಮಾನಿತರನ್ನು ಪರಿಚಯಿಸಿದರು. ಇನ್ನೋರ್ವ ಗ್ರಾ.ಪಂ. ಸದಸ್ಯೆ ದಯಾಲಿನ ವಂದಿಸಿದರು. ಸಿಬ್ಬಂದಿ ಡಾ.ದೇವಿಪ್ರಸಾದ್ ಬೊಳ್ಮ ಕಾರ್ಯಕ್ರಮವನ್ನು ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.