ಪರಿಸರ ಕುರಿತು ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ: ಮಮತಾರಾವ್ 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:  ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ವಿದ್ಯಾರ್ಥಿಗಳಿಂದ ಪ್ರಹಸನ ಹಾಗೂ ಕಲ್ಪಕುಂಡದ ತಯಾರಿಯ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಮಾ.25ರಂದು ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಮಾನವ ಸಂಪನ್ಮೂಲ ನಿರ್ದೇಶಕಿ ಮಮತಾರಾವ್  ನಾರಿಕೇಳ ಕುಂಡವನ್ನು ಗಿಡಗಳಿಗೆ ತೂಗಿಸುವ ಮೂಲಕ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಡಿದರು.

ಪರಿಸರ ಕುರಿತು ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ. ಮಕ್ಕಳು ಇಂತಹ ಕಾರ್ಯಕ್ರಮಗಳಿಂದಲೇ ಸೃಜನ ಶೀಲರಾಗುತ್ತಾರೆ. ಪ್ರತಿಫಲವಾಗಿ ಜೀವನದಲ್ಲಿ ಎಂತಹ ಪರಿಸ್ಥಿತಿ ಬಂದರೂ ಎದುರಿಸುವ ದಿಟ್ಟತನ ಮಕ್ಕಳಿಗೆ ಬರುತ್ತದೆ. ಬಾಲ್ಯದಲ್ಲಿ ನಾನು ಇಂತಹ ಕ್ರಿಯಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರ ಪರಿಣಾಮ ಇಂದು ಅತ್ಯುನ್ನತ ಸ್ಥಾನದಲ್ಲಿದ್ದೇನೆ. ಹಾಗೇ ನೀವೂ ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ವ್ಯರ್ತ ಮಾಡದೇ ಸಿಗುವ ಅವಕಾಶ ಸದುಪಯೋಗ ಮಾಡಿಕೊಳ್ಳಿ.

ಜೊತೆಗೆ ಪರಿಸರವನ್ನು ಸರಂಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಈ ಸದ್ಗುಣವನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಿ. ಹಾಗೇ ನಿಮ್ಮ ಸುತ್ತಮುತ್ತಲಿನವರೆಗೂ ಪರಿಸರವನ್ನು ಉಳಿಸಿ ಬೆಳೆಸುವಂತೆ ಪ್ರೇರೇಪಿಸುವುದರ ಜೊತೆಗೆ ಜಾಗೃತಿ ಮೂಡಿಸಿ. ಇದರ ಪ್ರತಿಫಲವಾಗಿ ಭವಿಷ್ಯತ್ ನಲ್ಲಿ  ಹಸಿರು ಸಿರಿ ಉಳಿಯಲಿದ್ದು, ಮುಂದಿನ ಪೀಳಿಗೆಗೆ ನೆರವಾಗಲಿದೆ ಎಂದು ಹೇಳುವ ಮೂಲಕ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳ ಕುರಿತು ಕಿವಿ ಮಾತು ಹೇಳಿದರು.

ಅಲ್ಲದೇ ಇಂದಿನ ಯುವಜನತೆ ಮೊಬೈಲ್ ಬಳಕೆಯನ್ನು ಇತಿಮಿತಿ ಇಲ್ಲದೇ ಬಳಸುತ್ತಿದ್ದು, ಶೈಕ್ಷಣಿಕ ಚಟುವಟಿಕೆ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಅತಿಯಾದರೇ ಅಮೃತವೂ ವಿಷ ಆಗುತ್ತದೆ. ಹಾಗಾಗಿ ಮೊಬೈಲ್ ಅನ್ನು ಮಿತವಾಗಿ ಬಳಸಿ, ಓದಿನತ್ತ ಗಮನ ಹರಿಸಿ. ಏಕೆಂದರೆ ಒಮ್ಮೆ ಕಲಿಯುವ ಹಂತ ದಾಟಿ ಮುಂದೆ ಹೋದರೆ ಮತ್ತೆ ಹಿಂದಿರುಗಿ ಓದಿನತ್ತ ಏಕಾಗ್ರತೆ ಬೆಳಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಸಿಗುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ಪ್ರಶಾಂತ ವಾತವರಣವಿರುವ ಪ್ರಕೃತಿ ಮಡಿಲಲ್ಲಿ ಕುಳಿತು ಓದುವ ಅಭ್ಯಾಸ ಮಾಡಿಕೊಳ್ಳಿ ಆಗ ತನ್ನಿಂದ ತಾನಾಗಿ ಓದುವ ಆಸಕ್ತಿ ಹೆಚ್ಚುತ್ತದೆ.  ಈ ಘಟ್ಟದಲ್ಲಿ ವಿದ್ಯಾರ್ಥಿಗಳ ಮನಸ್ಸು ಸೂಕ್ಷ್ಮವಾಗಿದ್ದು, ದೈಹಿಕ ಹಾಗೂ ಮಾ‌ನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಸದೃಢ ಬದುಕು ಕಟ್ಟಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ನಂತರ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ,  ಈ ಕಾರ್ಯಕ್ರಮದಲ್ಲಿ ನೀವು ಕಂಡುಕೊಂಡ ಉತ್ತಮ ಅಂಶವನ್ನು ನಿಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಿ. ಜೊತೆಗೆ ಇತರರಿಗೂ ಆ ವಿಚಾರಗಳನ್ನು ತಲುಪಿಸುವ ಮೂಲಕ ಪರಿಸರ ಉಳಿಸಿ ಬೆಳೆಸುವಲ್ಲಿ ಕೈ ಜೋಡಿಸಿ ಎಂದು ಹೇಳಿದರು.

ಇನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳಿಗೆ ವಿದ್ಯಾರ್ಥಿಗಳೇ ತಯಾರಿಸಿದ ಕಲ್ಪ ವೃಕ್ಷಕುಂಡವನ್ನೇ ಕಾಣಿಕೆಯಾಗಿ ನೀಡಲಾಯಿತು.

ಪರಿಸರ ಸಂಘ ನಡೆಸಿಕೊಟ್ಟ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಜಸ್ವಿನ್ ವಂದನಾರ್ಪಣೆ ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.