ತಣ್ಣಿರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ 3ನೇ ಕ್ಷೇತ್ರಕ್ಕೆ ಮಾ.29 ರಂದು ಮರು ಚುನಾವಣೆ ನಡೆದಿದ್ದು, ಕಾಂಗ್ರೆಸ್ ಪಕ್ಷ ಬೆಂಬಲಿತರಾಗಿ ಸ್ಪರ್ಧಿಸಿದ್ದ ನವೀನ್ ರವರು 498 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ
ಇವರಿಗೆ ಪ್ರತಿಸ್ಪರ್ಧಿಯಾಗಿ ಎಸ್ಡಿಪಿಐ ಪಕ್ಷ ಬೆಂಬಲಿತರಾಗಿ ಸ್ಪರ್ಧಿಸಿದ್ದ ಅಶ್ರಫ್ ಕರಾಯ ರವರು ಕೇವಲ162 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಡಿ.27 ರಂದು ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಕರಾಯ 1ನೇ ಮತ್ತು 3ನೇ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾಗಿ ಜಯವಿಕ್ರಮ್ ರವರು ಸ್ಪರ್ಧಿಸಿದ್ದು, ಎರಡೂ ಕ್ಷೇತ್ರಗಳಲ್ಲಿಯೂ ಜಯಗಳಿಸಿದ್ದರು. ಪ್ರಸ್ತುತ ಜಯವಿಕ್ರಮ್ರವರು ಕರಾಯ3ನೇ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತೆರವಾದ ಸದಸ್ಯ ಸ್ಥಾನಕ್ಕೆ ಮಾ.29ರಂದು ಉಪ ಚುನಾವಣೆ ನಡೆದಿತ್ತು.