ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹ: ಹೋರಾಟಕ್ಕೆ ಸಜ್ಜಾದ ದ.ಕ. ಜಿಲ್ಲಾ ಕಾಂಗ್ರೆಸ್

ಬೆಳ್ತಂಗಡಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ(ಕೆ.ಆರ್.ಡಿ.ಸಿ.ಎಲ್) ರಾಜ್ಯದ 10 ಹೆದ್ದಾರಿಗಳಲ್ಲಿ ರಸ್ತೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಿದೆ. ಇದರಿಂದಾಗಿ ಜನರ ಜೇಬಿಗೆ ಕತ್ತರಿ ಬೀಳಲಿದ್ದು, ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಸುವಲ್ಲಿ ಹೈರಾಣಾಗಿರುವ ವಾಹನ ಮಾಲೀಕರು, ಸವಾರರು ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಪಾವತಿಸಬೇಕಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ ಟೋಲ್ ಶುಲ್ಕ ಸಂಗ್ರಹಕ್ಕೆ ಕ್ರಮಕೈಗೊಳ್ಳಲಾಗಿದ್ದು ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಇದೀಗ ರಾಜ್ಯದಲ್ಲಾಗುತ್ತಿರುವ ಈ ಬೆಳವಣಿಗೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್  ಕೆ.ಆರ್.ಡಿ.ಸಿ.ಎಲ್  ರಾಜ್ಯ ಹೆದ್ದಾರಿಗಳಲ್ಲಿ  ಶುಲ್ಕ ಸಂಗ್ರಹಕ್ಕೆ ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಿರುವುದು ಸಾರ್ವಜನಿಕರಲ್ಲಿ ಬಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬಿ.ಸಿ ರೋಡಿನ ಬ್ರಹ್ಮರಕೂಟ್ಟು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎನ್.ಟಿ.ಕೆ. ಸುರತ್ಕಲ್ ಹಾಗೂ ನವಯುವ ಖಾಸಗಿ ಸಂಸ್ಥೆ ನಿರ್ವಹಿಸುವ ತಲಪಾಡಿ ಹಾಗೂ ಉಡುಪಿ ಜಿಲ್ಲೆಯ ಹೆಜಮಾಡಿ ಸಾಸ್ತಾನದಲ್ಲಿ ಟೋಲ್ ಸಂಗ್ರಹ ವ್ಯವಸ್ಥೆ ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಿದ್ದು, ನಿಯಮ ಜಾರಿ ಆಗಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.