ಬೆಳ್ತಂಗಡಿಯಲ್ಲಿ ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನಾಚರಣೆಯನ್ನು ಎ.6 ರಂದು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಕಚೇರಿಯಲ್ಲಿ ಬಿಜೆಪಿ ಧ್ವಜಾರೋಹಣ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಶ್ಯಾಂ ಪ್ರಸಾದ್ ಮುಖರ್ಜಿ, ದೀನ ದಯಾಳ್ ಉಪಾಧ್ಯಾಯರ ನೇತ್ರತ್ವದಲ್ಲಿ ಆರಂಭಗೊಂಡ ಭಾರತೀಯ ಜನತಾ ಪಕ್ಷವು  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದಕ್ಷ ಆಡಳಿತ ಹಾಗೂ ಲಾಲ್ ಕೃಷ್ಣ ಅಡ್ವಾಣಿ ಅವರ ರಥಯಾತ್ರೆಯಿಂದಾಗಿ  ಇಂದು ದೇಶದ ಉದ್ದಗಲದಲ್ಲಿ ಬೆಳೆದು ನಿಂತಿದೆ. ದೇಶಭಕ್ತ ಕಾರ್ಯಕರ್ತರ ಶ್ರಮದಿಂದ ಇಂದು ನರೇಂದ್ರ ಮೋದಿಯವರ ಜನಪರ ಆಡಳಿತ ಬಿಜೆಪಿ ದೇಶದಲ್ಲಿ ಶಕ್ತಿಯಾಗಿ ಬೆಳೆದಿದೆ. ಪ್ರತಿಯೊಬ್ಬರೂ ತಾವು ಬೆಳೆದ ಎತ್ತರಕ್ಕೆ ಪಕ್ಷದ ಕೊಡುಗೆಯನ್ನು ಸದಾ ಸ್ಮರಸಿದಾಗ ಮಾತ್ರ ಪಕ್ಷ ಬೆಳೆಯುತ್ತದೆ ಎಂದರು.

ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಪಕ್ಷದ ಬೆಳವಣಿಗೆ ನಿಷ್ಠಾವಂತ ಕಾರ್ಯಕರ್ತರ ಶ್ರಮ ಅಡಗಿದೆ. ಹಾಗಾಗಿ ಬಿಜೆಪಿ ಈ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ. ಅದರೊಂದಿಗೆ ಬಿಜೆಪಿಯ ಮುಖಂಡ ಅಥವಾ ಕಾರ್ಯಕರ್ತನ ನಡೆತೆಯ ಕಡೆಗೂ ಜನ ಗಮನವನ್ನು ಹರಿಸುತ್ತಾರೆ ಎಂದು ಎಚ್ಚರಿಸಿದರು.ವೇಣೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ನಡ್ತಿಕಲ್ಲು ಸ್ಥಾಪನಾ ದಿನ ಮಹತ್ವ ಹಾಗೂ ಪಕ್ಷ ಬೆಳೆದುಬಂದ ಬಗ್ಗೆ ಮಾತನಾಡಿದರು.
ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಜನಾರ್ದನ್, ಮಂಡಲ ಉಪಾಧ್ಯಕ್ಷರಾದ ಸೀತಾರಾಮ ಬಿ.ಎಸ್., ಕೊರಗಪ್ಪ ಗೌಡ, ವಸಂತಿ ಮಚ್ಚಿನ, ಪುಷ್ಷಾ ಆರ್. ಶೆಟ್ಟಿ, ಮಂಡಲ ಕಾರ್ಯದರ್ಶಿಗಳಾದ ಆನಂದ ಸಾಲ್ಯಾನ್, ಸುಶೀಲ ಕಳೆಂಜ, ರಜನಿ ಕುಡ್ವ ಉಪಸ್ಥಿತರಿದ್ದರು‌.

ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.