ಬೆಳಾಲಿನಲ್ಲಿ ಸಿರಿ ಉತ್ಪನ್ನಗಳ ಮಾರಾಟ ಮೇಳ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವತಿಯಿಂದ ಸಿರಿ ಉತ್ಪನ್ನಗಳ ಒಂದು ವಾರಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಎ.7 ರಂದು ಬೆಳಾಲು ಗ್ರಾ.ಪಂ ಅಧ್ಯಕ್ಷೆ ಜಯಂತಿ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬೆಳಾಲು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಗ್ರಾ.ಪಂ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಹಿರಿಯ ಮಾರುಕಟ್ಟೆ ಪ್ರಬಂಧಕರುಗಳಾದ ಸುಧಾಕರ, ಪದ್ಮನಾಭ, ಗ್ರಾ.ಪಂ ಸದಸ್ಯರುಗಳು, ಒಕ್ಕೂಟದ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾರುಕಟ್ಟೆ ವ್ಯವಸ್ಥಾಪಕ ಸಂದೇಶ್ ಸ್ವಾಗತಿಸಿ, ಪ್ರಮೀಳಾ ವಂದಿಸಿದರು.

ಜನೋಪಯೋಗಿ ಉದ್ದೇಶದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುವ ಸಿರಿ ಗ್ರಾಮೋದ್ಯೋಗ ಸಂಸ್ಥೆ ಅನೇಕ ಜನರಿಗೆ ಉದ್ಯೋಗ ಕಲ್ಪಿಸಿಕೊಡುವ ಉದ್ದೇಶದಿಂದ ಕಡಿಮೆ ಮತ್ತು ಕೈಗೆಟಕುವ ಬೆಲೆಯಲ್ಲಿ ಗ್ರಾಹಕರಿಗೆ ಮುಟ್ಟಿಸುವ ಪ್ರಯುಕ್ತ ಸಂಸ್ಥೆಯ ವತಿಯಿಂದ ಒಂದು ವಾರಗಳ ಕಾಲ ಸಿರಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.