ರಾಜ್ಯ ಲಗೋರಿ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಬೊಳ್ಮ

ಧರ್ಮಸ್ಥಳ: 2021-22 ನೇ ಸಾಲಿನ ಕರ್ನಾಟಕ ಲಗೋರಿ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಇತ್ತೀಚೆಗೆ ರಚನೆಯಾಗಿದ್ದು, ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಳ್ಮ ಆಯ್ಕೆಯಾಗಿದ್ದಾರೆ.
ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ ನಾರಾಯಣ ಗೌಡ ನೇತೃತ್ವದಲ್ಲಿ, ರಾಜ್ಯ ಮೀನುಗಾರಿಕೆ ಮತ್ತು ಬಂದರು ಒಳನಾಡು ಖಾತೆ ಸಚಿವ ಎಸ್ ಅಂಗಾರ ಗೌರವಾಧ್ಯಕ್ಷತೆಯಲ್ಲಿ ರಚನೆಗೊಂಡ ಈ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ದೊಡ್ಡಣ್ಣ ಬರೆಮೇಲು ಹಾಗೂ ಉಪಾಧ್ಯಕ್ಷರುಗಳಾಗಿ ರಾಜ್ಯದಲ್ಲಿ ಒಟ್ಟು 6 ಮಂದಿ ಆಯ್ಕೆಯಾಗಿದ್ದು, ಅವರಲ್ಲಿ ಡಾ. ದೇವಿಪ್ರಸಾದ್ ಬೊಳ್ಮ ಧರ್ಮಸ್ಥಳ ಓರ್ವರಾಗಿದ್ದಾರೆ.
ಡಾ. ದೇವಿಪ್ರಸಾದ್ ರವರು ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.