ಕಂದಾಯ ಸಚಿವ ಆರ್ ಅಶೋಕ್ ಬೆಳ್ತಂಗಡಿಗೆ

ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಚಿವರು

ಬೆಳ್ತಂಗಡಿ: ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ರವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇಂದು(ಎ.8) ರಾತ್ರಿ 8.45ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ನಾಳೆ(ಎ.9) ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಲಿರುವ, ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕಮಾರ್ ಕಟೀಲು ರವರ ಮನೆಯಲ್ಲಿ ನಡೆಯಲಿರುವ ಧರ್ಮನೇಮ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.