ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ: ಕಂದಾಯ ಸಚಿವರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಸಚಿವ ಆರ್ ಅಶೋಕ್ ರವರಿಗೆ ಅಭಿನಂದನಾ ಕಾರ್ಯಕ್ರಮ ಇಂದು (ಎ.9) ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು.
ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬೆಳ್ತಂಗಡಿ ತಾಲೂಕಿನ ವೇಣೂರು, ಬೆಳ್ತಂಗಡಿ, ಕೊಕ್ಕಡ ಹೋಬಳಿ ಕಛೇರಿ ಕಟ್ಟಡಕ್ಕೆ ತಲಾ ರೂ.15 ಲಕ್ಷದಂತೆ ಒಟ್ಟು 45.ಲಕ್ಷ ರೂ ಮಂಜೂರುಗೊಳಿಸುವುದಾಗಿ ಹೇಳಿದರು.
ರಾಜ್ಯದ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಭೂ ಪರಿವರ್ತನೆ (ಕನ್ವರ್ಷನ್) ಗಾಗಿ ಜನರು ವರ್ಷಗಟ್ಟಲೆ ಅಲೆದಾಡುತ್ತಿದ್ದು, ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ 15 ದಿನದ ಒಳಗೆ 1ಡೇ ಕನ್ವರ್ಷನ್ ಜಾರಿಗೊಳಿಸುವುದಾಗಿ ಹೇಳಿದರು. ಗ್ರಾಮದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಕಂದಾಯ ಇಲಾಖೆಯ ವತಿಯಿಂದ ನಡೆಯುತ್ತಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮುಂದುವರಿಯಲಿದೆ ಎಂದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ತಾಲೂಕಿನ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ ವಿತರಿಸಲಾಯಿತು.

ದ.ಕ. ಜಿಲ್ಲಾ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ, ಸಹಾಯಕ ಆಯುಕ್ತ ಡಾ. ಯತೀಶ್ ಉಲ್ಲಾಳ್, ತಹಶೀಲ್ದಾರ್ ಮಹೇಶ್ ಜೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಜಿ.ಪಂ ಸದಸ್ಯರುಗಳಾದ ಕೊರಗಪ್ಪ ನಾಯ್ಕ,ಮಮತಾ ಎಂ ಶೆಟ್ಟಿ, ಸೌಮ್ಯಲತಾ ಜಯಂತ್,ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ ರವರನ್ನು ವೇದಿಕೆಯಲ್ಲಿ ಗಣ್ಯರ ಸಮ್ಮುಖ ಶಾಲು ಹೊದಿಸಿ, ಸ್ಮರಣಿಕೆ ನೀಡಿ, ಸನ್ಮಾನಿಸಿ ಗೌರವಿಸಲಾಯಿತು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ನ.ಪಂ. ಉಪಾಧ್ಯಕ್ಷ ಜಯಾನಂದ ಗೌಡ, ತಾ.ಪಂ ಉಪಾಧ್ಯಕ್ಷೆ ವೇದಾವತಿ, ತಾ.ಪಂ ಸದಸ್ಯರಾದ ಕೃಷ್ಣಯ್ಯ ಆಚಾರ್, ಸುಧೀರ್, ಸುಶೀಲಾ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಯಶವಂತ ಗೌಡ, ಬಿಜೆಪಿ ಮಂಡಲ ಉಪಾದ್ಯಕ್ಷ ಸೀತಾರಾಮ ಬಿ.ಎಸ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಜಿಲ್ಲಾ ಕಾರ್ಯದರ್ಶಿ ಶಾರದಾ ರೈ, ಬಿಜೆಪಿ ಮುಖಂಡರು, ಗ್ರಾ.ಪಂ. ಸದಸ್ಯರುಗಳು, ಬಿಜೆಪಿ ಬೂತ್ ಸಮಿತಿ ಪ್ರಮುಖರು, ಶಕ್ತಿಕೇಂದ್ರದ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.