ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ: ದ.ಕ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಳ್ತಂಗಡಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉಭಯ ಜಿಲ್ಲೆಗಳ ನಾನಾ ಪ್ರದೇಶಗಳು ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಎ.13 ಹಾಗೂ 14 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎ.13 ಮತ್ತು 14 ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.