ಮುಂಡಾಜೆ ಸೀಟು ಬಳಿ ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ದುರ್ಮರಣ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ತೋಟತ್ತಾಡಿಯ ಸುದೀಪ್ ಭಂಡಾರಿ ಹಾಗೂ ಉಜಿರೆಯ ಪ್ರಶಾಂತ್ ಪೂಜಾರಿ ದಾರುಣ ಸಾವು

ಸುದೀಪ್ ಭಂಡಾರಿ

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಸೀಟು ಬಳಿ ಪಿಕಪ್ ವಾಹನಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಎ.16ರಂದುನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಾದ ತೋಟತ್ತಾಡಿ ಗ್ರಾಮದ ಕುತ್ರಿಜಾಲ್ ನಿವಾಸಿ ಶೇಖರ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ(30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರಶಾಂತ್ ಪೂಜಾರಿ

ಸಹಸವಾರ ಉಜಿರೆ ಗ್ರಾಮದ ಮುಂಡತ್ತೋಡಿ ನಿವಾಸಿ ಸುಂದರ ಪೂಜಾರಿಯವರ ಪುತ್ರ ಪ್ರಶಾಂತ್ ಪೂಜಾರಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇದೀಗ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸುದೀಪ್ ಭಂಡಾರಿಯವರು ತೋಟತ್ತಾಡಿ ಗ್ರಾಮದ ಬೆಂದ್ರಾಳ ಎಂಬಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದರು. ಉಜಿರೆ ಮುಂಡತ್ತೋಡಿ ನಿವಾಸಿ ಪ್ರಶಾಂತ್ ರವರು ಎಲೆಕ್ಟ್ರೀಷಿಯನ್ ಉದ್ಯೋಗ ನಿರ್ವಹಿಸುತ್ತಿದ್ದರು.

ಇವರಿಬ್ಬರೂ ಜೊತೆಯಾಗಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿರುವ ವೇಳೆ ಪಿಕಪ್ ವಾಹನವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಧರ್ಮಸ್ಥಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.