ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಕೊರೊನಾ ಲಸಿಕೆಯ ಮೊದಲ ಲಸಿಕೆ ಪಡೆದ ನಂತರವೂ ಸಿಎಂ ಬಿಎಸ್​ವೈ ಸೋಂಕಿಗೆ ಸಿಲುಕಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಇಂದು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್​ಗೆ ಸಿಎಂ ಯಡಿಯೂರಪ್ಪ ಹೋಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಯಡಿಯೂರಪ್ಪನವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗುತ್ತಿದೆ.

ಕೋವಿಡ್ ಮೊದಲ ಅಲೆ ವೇಳೆಯಲ್ಲಿಯೂ ಕೊರೊನಾ ಪಾಸಿಟಿವ್ ಆಗಿದ್ದ ಸಿಎಂ ಯಡಿಯೂರಪ್ಪ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಅದರಂತೆ ಈಗಲೂ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.