ಗುರುವಾಯನಕೆರೆ ಶಕ್ತಿನಗರದಲ್ಲಿ ಓಂ ಇಲೆಕ್ಟ್ರಿಕ್ ಸಂಸ್ಥೆ ಶುಭಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರದಲ್ಲಿ  `ಓಂ ಇಲೆಕ್ಟ್ರಿಕ್’  ನೂತನ ಸಂಸ್ಥೆಯು  ಶುಭಾರಂಭಗೊಂಡಿತು. ಕೋವಿಡ್-19 ನಿಯಮವನ್ನು ಪಾಲಿಸಿ ಸರಳವಾಗಿ ಕಾರ್ಯಕ್ರಮ ನಡೆದಿದ್ದು, ನೂತನ ಸಂಸ್ಥೆಯನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಕ್ತಿನಗರ ನವಶಕ್ತಿ ಗ್ರೂಪ್‌ನ ಶಶಿಧರ ಶೆಟ್ಟಿ ಬರೋಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಎಕ್ಸೆಲ್ ಪಿಯು ಕಾಲೇಜಿನ ಮುಖ್ಯಸ್ಥ ಸುಮಂತ್ ಕುಮಾರ್ ಜೈನ್, ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವೃಷಭರಾಜ ಜೈನ್, ಯುವರಾಜ ಜೈನ್, ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಅರೆಮಲೆಬೆಟ್ಟ ದೈವಸ್ಥಾನದ ಆಡಳಿತದಾರ ಸುಕೇಶ್‌ಕುಮಾರ್ ಕಡಂಬು, ಪ್ರಮುಖರಾದ ಹರೀಶ್ ಶೆಟ್ಟಿ ಮಂಗಳೂರು, ವಿಠಲ ಶೆಟ್ಟಿ ಲಾಯಿಲ, ಪುರಂದರ ಶೆಟ್ಟಿ, ಶ್ರೀಮತಿ ಸುಮನ, ಶ್ರೀಮತಿ ಶೃತಿ, ಶ್ರವಣ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು  ನೂತನ ಸಂಸ್ಥೆಗೆ ಶುಭ ಕೋರಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ ಸರ್ವರ ಸಹಕಾರ ಕೋರಿದರು. ಪುಂಜಾಲಕಟ್ಟೆ ಶಾಲಾ ಶಿಕ್ಷಕ ಧರಣೇಂದ್ರ ಕೆ. ಜೈನ್ ಕಾರ್ಯಕ್ರಮ ನಿರೂಪಿಸಿ, ಆನಂದ ಶೆಟ್ಟಿ ವಾತ್ಸಲ್ಯ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.