ಜಿಲ್ಲಾ ಉಸ್ತುವಾರಿ ಸಚಿವರ ಬೆಳ್ತಂಗಡಿಗೆ ಭೇಟಿ ಕಾರ್ಯಕ್ರಮ ಮೇ.5ಕ್ಕೆ ಮುಂದೂಡಿಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೋವಿಡ್-19 ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವ ಕೋಟ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸ್ಥಿತಿಗತಿಗಳನ್ನು ಅವಲೋಕಿಸುವ ಪ್ರಯುಕ್ತ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ನಾಳೆ (ಮೇ.4) ಬೆಳ್ತಂಗಡಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಮೇ.5ಕ್ಕೆ ಮುಂದೂಡಲಾಗಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ತುರ್ತು ಸಂಪುಟ ಸಭೆಯಲ್ಲಿ ಭಾಗವಹಿಸಬೇಕಾಗಿರುವ ಕಾರಣದಿಂದಾಗಿ ಬೆಳ್ತಂಗಡಿಯಲ್ಲಿ ಮೇ.4ರಂದು ಆಯೋಜಿಸಲಾದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪಾಲ್ಗೊಳ್ಳಲು ಅಸಾಧ್ಯವಾದ ಕಾರಣ ಸಭೆಯನ್ನು ಮೇ.5ಕ್ಕೆ ಮುಂದೂಡಲಾಗಿದೆ.

ಮೇ.5ರಂದು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ 10.30ಕ್ಕೆ ನಡೆಯಲಿರುವ ಕೋವಿಡ್-19ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಜಿಲ್ಲಾ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣದ ಬಗ್ಗೆ ಸೂಕ್ತ ಸಮಾಲೋಚನೆ ನಡೆಸಲಿದ್ದಾರೆ ಎಂದು ಶಾಸಕರ ಕಛೇರಿಯಿಂದ ಮಾಹಿತಿ ದೊರೆತಿದೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.