ಮದುವೆಯಲ್ಲಿ ಪಾಲ್ಗೊಂಡ 60 ಮಂದಿಗೆ ಕೊರೊನಾ ಪಾಸಿಟಿವ್: ಸಾಮಾಜಿಕ ಜಾಲತಾಣದಲ್ಲಿ ವೈರಲ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸುಳ್ಳು ಸುದ್ದಿ ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಕ್ರಮ: ಗ್ರಾ.ಪಂ.ಎಚ್ಚರಿಕೆ

8 Ways to Detect Fake News on Social Media – SSML

ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡ ೬೦ ಮಂದಿಗೆ ಕೊರೊನ ಪಾಸಿಟಿವ್ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಇದು ಸುಳ್ಳು ಸುದ್ದಿಯಾಗಿರುತ್ತದೆ ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇಂತಹ ಪ್ರಕರಣಗಳು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಂಡುಬಂದಿರುವುದಿಲ್ಲ.

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಾಟ್ಸಪ್ ಗ್ರೂಪ್ ಹಾಗೂ ಸ್ಟೇಟಸ್‌ಗಳಲ್ಲಿ ಯಾರೋ ಕಿಡಿಗೇಡಿಗಳು ವ್ಯಾಪಕವಾಗಿ ಅಪಪ್ರಚಾರ ಮಾಡಿದ್ದು, ಶಿರ್ಲಾಲು ಗ್ರಾಮ ಪಂಚಾಯತ್ ಕೊರೊನಾ ಕಾರ್ಯಪಡೆಯ ಗಮನಕ್ಕೆ ಬಂದಿದೆ.
ಸತ್ಯಕ್ಕೆ ದೂರವಾದ ಇಂತಹ ಸುಳ್ಳು ಸುದ್ದಿಗಳನ್ನು ಪ್ರಚಾರ ಪಡಿಸಿ ಜನರಲ್ಲಿ ಭೀತಿ ಹುಟ್ಟಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಸುಳ್ಳು ಸುದ್ದಿ ಹಬ್ಬಿಸುವವರ ಬಗ್ಗೆ ಸಾರ್ವಜನಿಕರು ಗ್ರಾಮ ಪಂಚಾಯತ್ ಮಟ್ಟದ ಕೊರೊನ ಕಾರ್ಯಪಡೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ಕೊರೊನಾ ಸೋಂಕಿಗೆ ಒಳಗಾದವರು ತಮ್ಮ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮಾಹಿತಿಯನ್ನು ಪ್ರಾಮಾಣಿಕವಾಗಿ ಕೊರೊನ ಕಾರ್ಯಪಡೆಗೆ ನೀಡಬೇಕುಹಾಗೂ ಪ್ರತಿಯೋರ್ವರೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಾಂಕ್ರಾಮಿಕ ರೋಗ ಪ್ರಸರಣ ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.