ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಶಿಕ್ಷಣ ಸಚಿವ ಸುರೇಶ್​ ಕುಮಾರ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಂಗಳೂರು: ಕೊರೊನಾ ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಮೇ.4ರಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದರೊಂದಿಗೆ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.