ಸಿಇಒ ರವೀಂದ್ರನ್ ಆತ್ಮಹತ್ಯೆ: ಪ್ರಕರಣ ತನಿಖೆಗಾಗಿ ಯುವವಾಹಿನಿ ಬೆಳ್ತಂಗಡಿ ಘಟಕ ಆಗ್ರಹ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ರವೀಂದ್ರನ್ ಡಿ

ಬೆಳ್ತಂಗಡಿ : ಮೇ 3ರಂದು ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರವೀಂದ್ರನ್ ರವರು ಸಂಘದ ಸಭಾಂಗಣದಲ್ಲಿ ನೇಣಿಗೆ ಶರಣಾಗಿದ್ದಾರೆ. ಓರ್ವ ನಿಷ್ಠಾವಂತ ಅಧಿಕಾರಿಯಾದ ಇವರು ಕಳೆದ 42ವರ್ಷಗಳಿಂದ ಸಂಘದ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ದುಡಿದವರು.

ಆದರೆ ಇತ್ತೀಚೆಗೆ ಅವರು ಸಂಘದ ಕೆಲ ನಿರ್ದೇಶಕರಿಂದ ಮಾನಸಿಕ ಕಿರುಕುಳ ಅನುಭವಿಸುತ್ತಿದ್ದು, ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಕೂಡ ಅವರ ಡೆತ್ ನೋಟಿನಲ್ಲಿ ಬರೆದಿದ್ದಾರೆ, ಇವರಿಗೆ ಹುದ್ದೆಯನ್ನು ತ್ಯಜಿಸುವಂತೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಇಹಲೋಕವನ್ನೆ ತ್ಯಜಿಸುವಂತೆ ಮಾಡಿದವರನ್ನು ಮಾತ್ರವಲ್ಲದೆ, ಈ ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡವಿರುವುದರ ಬಗ್ಗೆಯೂ ಕೇಳಿ ಬರುತ್ತಿದೆ.

ಆದ್ದರಿಂದ ಅವರ ಡೆತ್ ನೋಟನ್ನು ಪರಿಗಣಿಸಿ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕು. ಇಲ್ಲವಾದಲ್ಲಿ ಇಂತಹ ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲವಾದೀತು. ಒಂದು ವೇಳೆ ಇದರ ಬಗ್ಗೆ ಸಮಗ್ರ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕವು ಉಗ್ರ ಹೋರಾಟವನ್ನು ಮಾಡಲಿದೆ ಎಂದು ಘಟಕದ ಅಧ್ಯಕ್ಷ ಎಂ.ಕೆ ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.