ಕೊರೊನಾ ನಿಮಿತ್ತ ಹೆಚ್ಚುವರಿ ಪಡಿತರ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

One nation one ration card' can transform lives - The Hindu BusinessLine

ಬೆಳ್ತಂಗಡಿ: ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಪ್ರಧಾನ ಮಂತ್ರಿ ಗರೀಬ್ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಮೇ. ತಿಂಗಳಿಗೆ ಪಡಿತರ ಧಾನ್ಯವನ್ನು ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತ್ಯೋದಯ ಪಡಿತರ ಚಿಟಿದಾರರಿಗೆ ಪ್ರತಿ ಕುಟುಂಬಕ್ಕೆ 35 ಕೆ.ಜಿ ಅಕ್ಕಿ, ಪ್ರತಿ ಸದಸ್ಯರಿಗೆ 5ಕೆ.ಜಿ ಅಕ್ಕಿ, ಬಿಪಿಎಲ್ ಪಡಿತರ ಚೀಡಿದಾರರಿಗೆ 10ಕೆ.ಜಿ ಅಕ್ಕಿ, ಪ್ರತಿ ಕುಟುಂಬಕ್ಕೆ 2 ಕೆ.ಜಿ ಗೋಧಿ, ಉಚಿತವಾಗಿ ನೀಡಲಾಗುವುದು. ಹಾಗೂ ಎಪಿಎಲ್ ಪಡಿತರ ಚೀಟಿದಾರ ಏಕ ಸದಸ್ಯರಿಗೆ 5 ಕೆಜಿ ಅಕ್ಕಿ ಮತ್ತು ಇಬ್ಬರು ಮತ್ತು ಹೆಚ್ಚಿನ ಸದಸ್ಯ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿ, ಕೆ.ಜಿಗೆ ರೂ. 15 ರಂತೆ ವಿತರಿಸಲಾಗುವುದು.

ಪಡಿತರದಲ್ಲಿ ಅರ್ಧದಷ್ಟು ಬೆಳ್ತಿಗೆ ಅಕ್ಕಿ ಹಾಗೂ ಅರ್ಧದಷ್ಟು ಕುಚ್ಚಲಕ್ಕಿ ಎರಡನ್ನೂ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.