ಹತ್ಯಡ್ಕ ಗ್ರಾಮದ ನೆಕ್ಕರಡ್ಕ ವಾಳ್ಯ ನಿವಾಸಿ ಕೊರೊನಾಗೆ ಬಲಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ವಾಳ್ಯ ನಿವಾಸಿ ಸುಧೀರ್ ಖರೆ(57.ವ) ಎಂಬವರು ಮೇ.5ರಂದು ಕೊರೊನಾಕ್ಕೆ ಬಲಿಯಾಗಿದ್ದಾರೆ.
ಸುಮಾರು 15 ವರ್ಷಗಳಿಂದ ಬೆಂಗಳೂರಿನಲ್ಲಿ ವೈದಿಕ ವೃತ್ತಿ ನಡೆಸುತ್ತಿದ್ದ ಇವರು 15 ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ್ದರು. ಮನೆಗೆ ಬಂದಿದ್ದ ಅವರಿಗೆ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡಿದ್ದು, ಇವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.
ಪರೀಕ್ಷೆಯಿಂದ ಕೊರೊನಾ ಸೋಂಕು ಧೃಢಪಟ್ಟಿದ್ದು, ಆ ಕೂಡಲೇ ಇವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೇ.5 ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ಯಕ್ಷಗಾನ ಕಲಾವಿದರಾಗಿದ್ದ ಇವರು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಮೊಕ್ತೇಸರರಾಗಿ, 2006 ರಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.