ನಾಳೆಯಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ಕಠಿಣ ಕ್ರಮ: ಅನಗತ್ಯ ಸಂಚಾರ ನಡೆಸುವ ವಾಹನಗಳ ಜಪ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಸೇರಿದಂತೆ ಇಡೀ ಜಿಲ್ಲಾದ್ಯಾಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಸಾವು ನೋವುಗಳು ಸಂಭವಿಸುತ್ತಿವೆ. ಇಂತಹ ಸಂದರ್ಭದಲ್ಲಿಯೂ ಸಾರ್ವಜನಿಕರು ಬೇಜಾವಬ್ದಾರಿಯಿಂದ ನಡೆದುಕೊಳ್ಳುತ್ತಿದ್ದು, ಸೋಂಕು ನಿಯಂತ್ರಣಕ್ಕಾಗಿ ಮಾಡಿರುವ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ತಾಲೂಕಿನದ್ಯಾಂತ ನಾಕಾಬಂಧಿ ವಿಧಿಸಲು ಬೆಳ್ತಂಗಡಿ ಠಾಣಾ ಅಧಿಕಾರಿಗಳು ಮುಂದಾಗಿದ್ದು, ನಾಳೆಯಿಂದ ಅಂದರೆ ಮೇ.7ರಿಂದ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ಚೆಕ್‌ಪೋಸ್ಟ್ ಗಳನ್ನು ತೆರೆಯುವ ಮೂಲಕ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲು ತಯಾರಾಗಿದೆ.

ಈ ಕುರಿತು ಪ್ರಕಟನೆ ಹೊರಡಿಸಿರುವ ಬೆಳ್ತಂಗಡಿ ಠಾಣಾ ಅಧಿಕಾರಿಗಳು ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಜಪ್ತಿ ಮಾಡಲು ನಿರ್ಧರಿಸಿದ್ದು, ಅನಗತ್ಯವಾಗಿ ಹೊರ ಬರುವ ನಗರದ ಸಾರ್ವಜನಿಕರ ವಿರುದ್ಧ ಕಠಿಣ  ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಜೊತೆಗೆ ಉಜಿರೆ, ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ  ಗಸ್ತು ಕರ್ತವ್ಯ ನಿರತ ಸಿಬ್ಬಂದಿಗಳನ್ನು ನೇಮಿಸಿದ್ದು, ನಿಗದಿತ ಅವಧಿಯೊಳಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡದೇ ಇದ್ದಲ್ಲಿ Karnataka Epidemic Deseases Act ಅಡಿಯಲ್ಲಿ ಪ್ರಕರಣ ದಾಖಲಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿದೆ.

ಇನ್ನು ಇದೇ ಮಾದರಿಯನ್ನು ಪ್ರತಿಯೊಂದು ಠಾಣೆ ಅನುಸರಿಸಿದ್ದರೆ ಜನ ಸಂದಣಿಯನ್ನು ತಡೆಗಟ್ಟಬಹುದಾಗಿದ್ದು, ಕೊರೊನಾ ಸೋಂಕನ್ನು ನಿಯಂತ್ರಿಸಬಹುದಾಗಿದೆ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.