ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ: ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅವಕಾಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ.6ರಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಮೇ.7 ರಿಂದ ಅಂದರೆ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ.
ಜೊತೆಗೆ ಔಷಧ ಅವಶ್ಯ ಉಳ್ಳವರು ಸಮೀಪ ಮೆಡಿಕಲ್ ಗೆ ಪ್ರಥಮ ಆದ್ಯತೆ ನೀಡಬೇಕಿದ್ದು, ಅನಗತ್ಯ ಸಂಚಾರ ಮಾಡಿದ್ದರೆ, ವಾಹನಗಳಲ್ಲಿ ಬೇರೆ ಕಡೆ ತೆರಳಿದ್ದರೆ ವಾಹನ ಜಪ್ತಿ ಮಾಡುವಂತೆ ಪೊಲೀಸ್ ಇಳಾಖೆಗೆ ಆದೇಶ ನೀಡಲಾಗಿದೆ.

ಮೇ.15 ಬಳಿಕ ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಅವಕಾಶವಿಲ್ಲ. ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಿ. ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಿ ಎಂದು ಸಭೆಯಲ್ಲಿ ಹೇಳಿದ್ದಾರೆ.

ಸಭೆಯ ಪ್ರಮುಖಾಂಶಗಳು

  • ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ.
  • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು.
  • ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು‌.
  • ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್.
  • ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ.
  • ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನು ಕಟ್ಟುನಿಟ್ಟಿನ ಕ್ರಮ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.