ದ.ಕ.ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ವಾರಾಂತ್ಯ ಕರ್ಪ್ಯೂ: ತುರ್ತು ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೋವಿಡ್-19 ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹೇರಿರುವ ವಾರಾಂತ್ಯ ಕರ್ಫ್ಯೂ ದ.ಕ.ಜಿಲ್ಲೆಯಲ್ಲಿ ಮುಂದುವರೆಯಲ್ಲಿದ್ದು, ಇಂದು ರಾತ್ರಿ ಅಂದರೆ ಮೇ.7ರ ರಾತ್ರಿ  9 ಗಂಟೆಯಿಂದ ಮೇ.10 ಅಂದರೆ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದ್ದಾರೆ.

ಔಷಧಿ ಅಂಗಡಿಗಳು , ಆಸ್ಪತ್ರೆಗಳು, ಹಾಪ್ ಕಾಮ್ಸ್, ಹಾಲಿನ ಅಂಗಡಿಗಳು, ತರಕಾರಿ, ಹಣ್ಣುಹಂಪಲು ತಳ್ಳುಗಾಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಹೊಟೇಲ್ ನಲ್ಲಿ ಪಾರ್ಸೆಲ್ ಇರಲಿದೆ.  ಇವುಗಳನ್ನು ಹೊರತುಪಡಿಸಿ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6ರವರೆಗೆ ಎಲ್ಲಾ ರೀತಿಯ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಿದ್ದು, ಮೀನು ಸೇರಿದಂತೆ ಆಹಾರ ವಸ್ತುಗಳ ಮಾರಾಟದ ಮೇಲೆಯೂ ನಿಷೇಧ ಹೇರಲಾಗಿದೆ.

ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24×7 ಕಾರ್ಯಾಚರಣೆಗಳ ಅಗತ್ಯವಿರುವ ಸಂಸ್ಥೆಗಳಿಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು, ಕೈಗಾರಿಕೆಗಳು/ಕಂಪನಿಗಳು ಈ ಸಂದರ್ಭ ಯಾವುದೇ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶವಿಲ್ಲ. ನಿರ್ಮಾಣ ಚಟುವಟಿಕೆಗಳು ನಡೆಯುವ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದಲ್ಲಿ ಕಾಮಗಾರಿ ನಡೆಸಬಹುದಾಗಿದ್ದು,  ಹೊರಗಿನ ಪ್ರದೇಶಗಳಿಂದ ಕಾರ್ಮಿಕರನ್ನು ಕರೆತರಲು ಅವಕಾಶವಿಲ್ಲ ಎಂಬ ನಿಯಮ ಮಾಡಲಾಗಿದೆ.

ರೋಗಿಗಳು ಮತ್ತು ಅವರ ಪರಿಚಾರಕರು ವೈದ್ಯಕೀಯ ತುರ್ತು ಸಂದರ್ಭ ಜನರಿಗೆ ಕನಿಷ್ಠ ಪುರಾವೆಗಳೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.