ಧರ್ಮಸ್ಥಳ: ವಾಹನ ಸೌಕರ್ಯವಿಲ್ಲದೇ ಪರದಾಡುತ್ತಿದ್ದ ಸೋಂಕಿತರಿಗೆ ನೆರವಾದ ಗ್ರಾಮಾಭಿವೃದ್ಧಿ ಯೋಜನೆಯ ‘ವಾಹನ ಸೇವೆ’

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಕೊರೊನಾ ಸೋಂಕಿತರು ಹಾಗೂ ಶಂಕಿತರನ್ನು ನಗರ ಪ್ರದೇಶದ ಆಸ್ಪತ್ರೆಗೆ ಸಾಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದ ಪ್ರತಿ ತಾಲ್ಲೂಕಿಗೆ ಎರಡು ವಾಹನಗಳನ್ನು ಒದಗಿಸಿದ್ದು, ಈ ಯೋಜನೆ ಅಡಿಯಲ್ಲಿ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿರುವ  ಗ್ರಾಮೀಣಾಭಿವೃದ್ಧಿ ಯೋಜನೆಯ ‘ವಾಹನ ಸೇವೆ’ ಮೇ.7ರಂದು 14 ಮಂದಿ ಸೋಂಕು ಪೀಡಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ಕರೆದ್ಯೂಯುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದೆ.

ವಾಹನದ ಸೌಕರ್ಯವಿಲ್ಲದೇ ಪರದಾಡುತ್ತಿದ್ದ ವಿರಾಜಪೇಟೆಯ 14 ಮಂದಿ ಸೋಂಕಿತರಿಗೆ ನಿಗದಿತ ವೇಳೆಗೆ ಅಂಬುಲೆನ್ಸ್ ಸೇವೆ ಒದಗಿಸಿದ್ದು,  ಭಾಗಮಂಡಲ, ಕಕ್ಕಾಬೆ, ಗೋಣಿಕೊಪ್ಪ ಮುಂತಾದ ಹಳ್ಳಿಗಳಿಂದ ಮಡಿಕೇರಿ ಜಿಲ್ಲಾ ಆಸ್ಪತ್ರೆ ಮತ್ತು ವಿರಾಜಪೇಟೆಯಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಕರೆದೊಯ್ಯುವಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ವ್ಯವಸ್ಥೆಗೊಳಿಸಲಾದ ವಾಹನಗಳು ಯಶಸ್ವಿಯಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ವಾಹನ ಚಾಲಕ ಮಂಜುನಾಥ್ ಮತ್ತು ವಿರಾಜಪೇಟೆಯ ಯೋಜನಾಧಿಕಾರಿಗಳಾದ ಪದ್ಮಯ್ಯ ಸಿ.ಹೆಚ್.ರವರು ಸೋಂಕಿತರ ಸೇವೆಯಲ್ಲಿ ನಿರತರಾಗಿದ್ದು, ಯೋಜನೆಯ ಈ ಸಾಮಾಜಿಕ ಕಳಕಳಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.