ಕೋವಿಡ್ ನಿಯಮ ಉಲ್ಲಂಘಿಸಿ ವ್ಯಾಪಾರ: ತಾಲೂಕಿನಾದ್ಯಂತ ವಿವಿಧ ಅಂಗಡಿಗಳ ಮೇಲೆ ಕೇಸು ದಾಖಲು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ, ಉಜಿರೆ ಹಾಗೂ ಮದ್ದಡ್ಕದಲ್ಲಿ ಕೋವಿಡ್ ನಿಯಮವನ್ನು ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ವಿವಿಧ ಅಂಗಡಿಗಳು ಹಾಗೂ ಹೊಟೇಲುಗಳ ಮೇಲೆ ಪೊಲೀಸರು ಕೇಸು ದಾಖಲಿಸಿಕೊಂಡ ಘಟನೆ ನಡೆದಿದೆ.

ಕೊರೊನಾ ಹರಡುವುದನ್ನು ವ್ಯಾಪಕವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಕೋವಿಡ್ ನಿಯಮವನ್ನು ಮೀರಿ, ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿ ತಾಲೂಕಿನ ವಿವಿಧೆಡೆಗಳಲ್ಲಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳ ಮೇಲೆ ಕೇಸು ದಾಖಲಿಸಿಕೊಂಡಿದಾರೆ.

ಉಜಿರೆಯ ಪೇಟೆಯಲ್ಲಿರುವ ಚಪ್ಪಲಿ ಅಂಗಡಿ, ಸೆಲೂನ್, ಹೊಟೇಲು, ಮದ್ದಡ್ಕದಲ್ಲಿರುವ ಮೊಬೈಲ್ ಅಂಗಡಿ ಹಾಗೂ ಬೆಳ್ತಂಗಡಿಯಲ್ಲಿರುವ ಚಿನ್ನದ ಅಂಗಡಿಯೊಂದರಲ್ಲ್ಲಿ ಗ್ರಾಹಕರನ್ನು ಸೇರಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆನ್ನಲಾಗಿದ್ದು, ಆ ಅಂಗಡಿಗಳಿಗೆ ಪೊಲೀಸರು ದಾಳಿ ನಡೆಸಿದ್ದು, ಅಪಾಯಕಾರಿ ಸೋಂಕು ಹರಡುವ ಬಗ್ಗೆ ನಿರ್ಲಕ್ಷ್ಯತನ ತೋರಿ, ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.