ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಕೋವಿಡ್ ಪ್ರಗತಿ ಪರಿಶೀಲನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಪ್ರಸರಣವನ್ನು ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯು ಮೇ.7 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕೋವಿಡ್ -19 ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಲ್ಲಿ ಎಲ್ಲರೂ ಕೈಜೋಡಿಸಿ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ, ಬೆಳಾಲು ಗ್ರಾ.ಪಂ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಧರ್ಮಸ್ಥಳ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್, ಬೆಳಾಲು ಬೀಟ್ ಪೊಲೀಸ್ ರಾಹುಲ್ ರಾವ್, ಕಂದಾಯ ನಿರೀಕ್ಷಕ ಪವಾಡಪ್ಪ ದೊಡಮನಿ, ಬೆಳಾಲು ಗ್ರಾ.ಪಂ ಸದಸ್ಯರುಗಳಾದ ಸುರೇಂದ್ರ ಗೌಡ, ಪ್ರವೀಣ್ ವಿಜಯ್, ವಿದ್ಯಾ ಶ್ರೀನಿವಾಸ, ಯಶೋಧಾ ಕುತ್ಯಾರಗುಂಡಿ, ಕೃಷ್ಣಯ್ಯ ಆಚಾರ್ಯ, ಪ್ರೇಮ, ಯಶೋಧಾ ಸುರುಳಿ, ಬೆಳಾಲು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹೆಚ್. ಪದ್ಮಗೌಡ, ಸಿಇಒ ನಾರಾಯಣ ಗೌಡ, ಬೆಳಾಲು ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ, ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ಸಿಬ್ಬಂದಿ ವರ್ಗ, ಗ್ರಾಮ ಕರಣಿಕರು ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಗ್ರಾ.ಪಂ ಕಾರ್ಯದರ್ಶಿ ಮೋಹನ ಬಂಗೇರ ಸ್ವಾಗತಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.