ಗ್ರಾ.ಪಂ.ಉಜಿರೆ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕೋವಿಡ್ ಪ್ರಗತಿ ಪರಿಶೀಲನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯು ಮೇ.7 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕೋವಿಡ್ -19 ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೊನಾ ಹರಡುವುದನ್ನು ಸಂಪೂರ್ಣವಾಗಿ ತಡೆಗಟ್ಟುವುದಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಎಂ, ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಉಜಿರೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅರ್ಚನಾ, ಉಜಿರೆ ಗ್ರಾ.ಪಂ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ಕಾರ್ಯದರ್ಶಿ ಜಯಂತ್ ಯು.ಬಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ ಶೆಟ್ಟಿ ಪಿ.ಹೆಚ್ ಸ್ವಾಗತಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.