ಕಾಶಿಪಟ್ಣ: ಶಾಸಕರ ನೇತೃತ್ವದಲ್ಲಿ ಗ್ರಾಮೀಣ ಮಟ್ಟದ ಕೋವಿಡ್ ಪ್ರಗತಿ ಪರಿಶೀಲನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಾಶಿಪಟ್ಣ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯು ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಮೇ.8 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕೋವಿಡ್ -19 ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೊನಾ ಹರಡುವುದನ್ನು ಸಂಪೂರ್ಣವಾಗಿ ತಡೆಗಟ್ಟುವುದಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಸಲಹೆ ನೀಡಿದರು.

ಹಾಗೇ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿರುವವರು ಮೂಲಕ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಅಂತವರು ಸಾರ್ವಜನಿಕ ಸಂಚಾರದಿಂದ ದೂರ ಉಳಿಯಬೇಕು. ಈ ನಿಟ್ಟಿನಲ್ಲಿ ಗ್ರಾ.ಪಂ ಸದಸ್ಯರು ಹಾಗೂ ಕೋವಿಡ್ ಟಾಸ್ಕ್ ಪೋರ್ಸ್ ಪಡೆಯ ಸದಸ್ಯರು ಕಾರ್ಯಾಚರಿಸಬೇಕಿದ್ದು,  ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿರುವವರು ಮನೆಯಿಂದ ಹೊರಬರದೇ ನೋಡಿಕೊಳ್ಳುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಸತೀಶ್ ಕೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್, ಗ್ರಾ.ಪಂ ವ್ಯಾಪ್ತಿಯ ಶಾಲಾ ಮುಖ್ಯೋಪಾದ್ಯಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾಕಾರ್ಯತೆಯರು ಹಾಗೂ ಇತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.