ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮತ್ತೋಂದು ಸತ್ಕಾರ್ಯ: ಗರ್ಭಿಣಿ ಸ್ತ್ರೀಯರಿಗೆ ಉಚಿತ ಹೆರಿಗೆ ಸೌಲಭ್ಯ ಘೋಷಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಕೋವಿಡ್ ವಿರುದ್ಧ ಹೋರಾಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗಣನೀಯವಾದ ಕೊಡುಗೆ ನೀಡುತ್ತಿದ್ದು, ತನ್ನ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರದ ಮೂಲಕ ಸೋಂಕಿತರ ಚಿಕಿತ್ಸೆಗಾಗಿ ಕೋವಿಡ್ ಕೇರ್ ಸೆಂಟರ್ ಹಾಗೂ ವಾಹನ ಸೇವೆ ಕಾರ್ಯಕ್ರಮವನ್ನು ನಡೆಸುತ್ತಿದೆ.

ಇದೀಗ ಮತ್ತೊಂದು ಹೆಜ್ಜೆ ಮುಂದೆ ಬಂದು ಸಾಮಾಜಿಕ ಕಳಕಳಿ ಮೆರೆದಿದ್ದು, ಆರೋಗ್ಯ ಬಿಕ್ಕಟ್ಟು ಎದುರಾಗಿರುವ ಇಂತಹ ಸಂದರ್ಭದಲ್ಲಿ ಗರ್ಭಿಣಿಯರ ಆರೋಗ್ಯ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸಲು ಮುಂದಾಗಿದೆ.

ಹೌದು ಸದ್ಯ ಸರ್ಕಾರಿ ಆಸ್ಪತ್ರೆಗಳನ್ನು ಕೋವಿಡ್ ಸೋಂಕಿತರ ಶುಶ್ರೂಷೆಗಾಗಿ ಮೀಸಲಿಟ್ಟಿದ್ದು, ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಗರ್ಭಿಣಿಯರ ಚಿಕಿತ್ಸೆ ಹಾಗೂ ಹೆರಿಗೆಗೆ ಸಮಸ್ಯೆಯಾಗುವ ಸಂಭವಿದ್ದು, ಇದಕ್ಕೆ ಪರಿಹಾರವಾಗಿ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಂದ ಅನುಮತಿಯನ್ನು ಪಡೆದು ಬಂದರೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೌಲಭ್ಯ ನೀಡುವುದಾಗಿ ಘೋಷಿಸಿದೆ.

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು ಗರ್ಭಿಣಿ ಸ್ತ್ರೀಯರ ಹೆರಿಗೆಗೆ ಅನಾನುಕೂಲ ಆಗಬಾರದೆಂಬ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಿದ್ದು, ತಾಲ್ಲೂಕಿನ ಸುತ್ತ-ಮುತ್ತಲಿನ  ಗರ್ಭಿಣಿ ಸ್ತ್ರೀಯರು ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ.

ಈ ಕುರಿತು  ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೇಳಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.