ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊರೊನಾ ಮಹಾಮಾರಿ ಶೀಘ್ರವಾಗಿ ತೊಲಗಿಸುವಂತೆ ಪ್ರಾರ್ಥನೆ ಸಲ್ಲಿಸಿದ ಮಾಜಿ ಶಾಸಕರು

ಬೆಳ್ತಂಗಡಿ: ಕೋಟಿ ಚೆನ್ನಯ ದೇಯಿ ಬೈದ್ಯೆತಿ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಕ್ಕೆ ಮಾಜಿ ಶಾಸಕ ಕೆ ವಸಂತ ಬಂಗೇರ ರವರು ಮೇ.19 ರಂದು ಭೇಟಿ ನೀಡಿದರು.

ಇದೇ ವೇಳೆ ಗೆಜ್ಜೆಗಿರಿಯ ಶಿಖರದಲ್ಲಿರುವ ನಾಗಸಾನಿಧ್ಯ, ಕೋಟಿ ಚೆನ್ನಯರ ಮೂಲಸ್ಥಾನ ಗರಡಿ, ದೇಯಿ ಬೈದ್ಯೆತಿ ಮಹಾ ಸಮಾಧಿ, ಧೂಮಾವತಿ ಗುಡಿ, ಕುಪ್ಪೆ ಪಂಜುರ್ಲಿ ಗುಡಿಗಳಿಗೆ ಭೇಟಿ ನೀಡಿದ ಅವರು ಕಾರಣಿಕ ಶಕ್ತಿ ದೇಯಿ ಬೈದ್ಯೆತಿಯ ಗುಡಿಯಲ್ಲಿ ಜಗತ್ತಿಗೆ ಆವರಿಸಿದ ಕೋವಿಡ್ ಮಹಾಮಾರಿಯನ್ನು ಆದಷ್ಟು ಶೀಘ್ರ ತೊಲಗಿಸುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ನಂತರ ಕಛೇರಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಡಾ. ರಾಜಾರಾಮ್, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲ್, ಉಪಾಧ್ಯಕ್ಷ ಪೀತಾಂಬರ ಹೆರಾಜೆ, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಅನುವಂಶಿಕ ಮೊಕ್ತೇಸರ ಶ್ರೀಧರ ಪೂಜಾರಿ, ಆಂತರಿಕ ಲೆಕ್ಕಪರಿಶೋಧಕ ಶೇಖರ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.