ಕೋವಿಡ್ ಬಿಕ್ಕಟ್ಟು ನಿರ್ವಹಣೆಗಾಗಿ ಪ್ರತಿ ಗ್ರಾಮ ಪಂಚಾಯತ್ ಗೆ 50 ಸಾವಿರ ಅನುದಾನ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೋವಿಡ್ 2ನೇ ಅಲೆಯ ಅಬ್ಬರ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿದ್ದು, ಮೊದಲನೇ ಅಲೆಗೆ ಹೋಲಿಸಿದರೆ ಪ್ರಸ್ತುತ ಹಳ್ಳಿಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ.

ಕೋವಿಡ್ ನಿಯಂತ್ರಣಕ್ಕಾಗಿ ಜಾರಿ ಮಾಡಿರುವ ಲಾಕ್ ಡೌನ್ ನಿಂದಾಗಿ ನಗರ ಪ್ರದೇಶಗಳಿಂದ ಜನರು ವಲಸೆ ಬರುತ್ತಿದ್ದು, ವಲಸೆ ಬಂದವರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹಬ್ಬುತ್ತಿದೆ.

ಈ ನಿಟ್ಟಿನಲ್ಲಿ ಕೋವಿಡ್‌ ನಿರ್ವಹಣೆಗಾಗಿ ಮುಂಗಡವಾಗಿ ಪ್ರತಿ ಗ್ರಾಮ ಪಂಚಾಯಿತಿಗೆ 50 ಸಾವಿರ ರೂ.ಗಳನ್ನು ನೀಡಲು ಮುಖ್ಯಮಂತ್ರಿ ಆದೇಶಿಸಿದ್ದು, ಗ್ರಾಮೀಣ ಪ್ರದೇಶಗಳ ಸೋಂಕಿತರ ಮನೆಗೆ ಭೇಟಿ ನೀಡಿ, ಅವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಿಸಲು ಸ್ಥಳೀಯಮಟ್ಟದ ಕಾರ್ಯಪಡೆಗೆ ನೆರವಾಗಲಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಮಾಧ್ಯಮಗಳೆದುರು ಮಾತನಾಡಿದ ಅವರು ‘ಕೋವಿಡ್ ಪ್ರಕರಣ ಹೆಚ್ಚುತ್ತಿರುವ  ಪ್ರದೇಶಗಳಲ್ಲಿ ತಲಾ 25ರಂತೆ ಆಮ್ಲಜನಕ ಸಾಂದ್ರಕಗಳನ್ನು ಕಳುಹಿಸಿಕೊಡಲಾಗುತ್ತಿದ್ದು, ಕೇಂದ್ರದಿಂದ ಇತ್ತೀಚೆಗೆ 800 ಆಮ್ಲಜನಕ ಸಾಂದ್ರಕಗಳು ಬಂದಿದೆ ಎಂದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.