ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಖಾಸಗಿ ಆಸ್ಪತ್ರೆಯವರು ಬಿಲ್ ಹಣಕ್ಕಾಗಿ ಒತ್ತಾಯಿಸುವಂತಿಲ್ಲ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಿಲ್ ಪಾವತಿ ಮಾಡದೆ ಮೃತದೇಹ ಹಸ್ತಾಂತರಿಸಲು ನಿರಾಕರಿಸಿದ ಆಸ್ಪತ್ರೆಗಳ ನೋಂದಣಿಯನ್ನು ರದ್ದುಗೊಳಿಸಲು ಕ್ರಮ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೂಚನೆ

COVID-19 In Odisha: 8 More Succumb As Death Toll Climbs To 522 | Odisha

ಬೆಳ್ತಂಗಡಿ: ರಾಜ್ಯದ ಅನೇಕ ಖಾಸಗಿ ಆಸ್ಪತೆಗಳಲ್ಲಿ ಕೋವಿಡ್ -19 ಸೊಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತನ್ನು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿದೆ.
ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕರ್ನಾಟಕ ಪ್ರೈವೆಟ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ (ಕೆಪಿಎಂಇ)2007 ಭಾಗ 11(i) ಉಪಷರತ್ತು (vi) ಅನ್ವಯ ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಅಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸುವುದಾಗಲಿ ಅಥವಾ ಒತ್ತಡ ಹೇರುವುದಾಗಲೀ ಮಾಡುವಂತಿಲ್ಲ. ಅಲ್ಲದೆ ಬಿಲ್ ಪಾವತಿ ಮಾಡದೇ ಇದ್ದ ಪಕ್ಷದಲ್ಲಿ ಮೃತದೇಹ ಹಸ್ತಾಂತರ ಮಾಡಲು ನಿರಾಕರಿಸುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.
ಆದುದರಿಂದ ಇನ್ನು ಮುಂದಕ್ಕೆ ಇಂತಹ ಪ್ರಕರಣಗಳು ವರದಿಯಾದಲ್ಲಿ ಕೆಪಿಎಂಸಿ ಕಾಯ್ದೆಯ ನಿಯಮಾನುಸಾರ ಅಂತಹ ಆಸ್ಪತ್ರೆಗಳ ನೊಂದಣಿಯನ್ನು ರದ್ದುಗೊಳಿಸಿ ಸೂಕ್ತ ಕ್ರಮಕೈಗೊಳ್ಳಲು ಕಾರ್ಯಪ್ರವೃತ್ತರಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ರವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ(ಅಧ್ಯಕ್ಷರು- ಕೆಪಿಎಂಸಿ)ಗಳಿಗೆ ಸೂಚಿಸಿದ್ದಾರೆ.
ಅಲ್ಲದೆ ಈ ರೀತಿ ವರದಿಯಾದ ಪ್ರಕರಣಗಳ ಮಾಹಿತಿ ಹಾಗೂ ಕೈಗೊಂಡ ಕ್ರಮಗಳ ಕುರಿತು ವಾರಕ್ಕೆ ಒಂದು ಬಾರಿ ರಾಜ್ಯಮಟ್ಟಕ್ಕೆ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.