ಗ್ರಾಮೀಣ ಗ್ರಂಥಾಲಯ ಮೇಲ್ವಿಚಾರಕರ ಗೌರವಧನ ಹೆಚ್ಚಳ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಬದಲಾವಣೆ, ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ, ಗೌರವಧನ 7000 ದಿಂದ 12000 ಕ್ಕೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಮೇ.26ರಂದು ಆರ್. ಡಿ. ಪಿ. ಆರ್. ಸರಕಾರದ ಪ್ರಧಾನ ಕಾರ್ಯದರ್ಶಿ ಉಮಾಮಹಾದೇವನ್ ಅವರು ಆದೇಶ ಹೊರಡಿಸಿದ್ದಾರೆ.

ಹಾಗೇ ಗ್ರಾಮ ಪಂಚಾಯಿತಿ ಗ್ರಂಥಾಲಯ ಎಂಬ ಹೆಸರನ್ನು ಗ್ರಾಮ ಪಂಚಾಯಿತಿ ಹಾಗೂ ಗ್ರಂಥಾಲಯ ಮಾಹಿತಿ ಕೇಂದ್ರ ಎಂದು ಮರು ಪದ ನಾಮಿಕರಿಸಿದೆ.

ಸ್ಥಳೀಯಾಡಳಿತ ಗ್ರಾಮ ಪಂಚಾಯತಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ವರ್ಗಾವಣೆಗೊಂಡಿರುವ ಗ್ರಾಮೀಣ ಗ್ರಂಥಾಲಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಬದಲಾವಣೆ ಹಾಗೂ ಬಯೋಮೆಟ್ರಿಕ್ ಹಾಜರಾತಿಯ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜ ವಿಧಾನ ಸಭಾ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದರು.

ಈ ಮನವಿ ಬೆನ್ನಲ್ಲೇ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಬದಲಾವಣೆ, ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ, ಗೌರವಧನ 7000 ದಿಂದ 12000 ಕ್ಕೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.