ಬೆಳ್ತಂಗಡಿ: ಈ ಬಾರಿ ವಿಭಿನ್ನ ವಿಧಾನದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಈ ಬಾರಿ 8 ಲಕ್ಷ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವವರಿದ್ದು, ಕೆಲ ಸಮೀಕ್ಷೆಗಳಲ್ಲಿ ಪರೀಕ್ಷೆ ಬೇಡ ಅನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು.

ಆದರೆ, ಎಸ್​ಎಸ್​ಎಲ್​ಸಿಗೆ ಪರೀಕ್ಷೆ ನಡೆಸದೇ ಇರುವುದು ಸಾಧ್ಯವಿಲ್ಲ. ಎಸ್​ಎಸ್​ಎಲ್​ಸಿ ಮಕ್ಕಳನ್ನು ಕಳೆದ ವರ್ಷದ ಶೈಕ್ಷಣಿಕ ಪ್ರಗತಿ ಆಧಾರದ ಮೇಲೆ ಪಾಸ್​ ಮಾಡೋಣವೆಂದರೆ ಕಳೆದ ಬಾರಿ 9ನೇ ತರಗತಿ ಪರೀಕ್ಷೆಯೂ ನಡೆದಿಲ್ಲ. ಆದ್ದರಿಂದ ಈ ಬಾರಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಎರಡೇ ಪ್ರಶ್ನೆ ಪತ್ರಿಕೆಗಳ ಮೂಲಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಲಾಗಿದ್ದು, ಒಟ್ಟು 6 ವಿಷಯಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗುವುದು. ಹಾಗೇ ಎರಡೇ ಪ್ರಶ್ನೆ ಪತ್ರಿಕೆಗಳನ್ನು ತೆಗೆಯಲ್ಲಿದ್ದು, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಸೇರಿಸಿ ಒಂದು ಪೇಪರ್- ಇನ್ನೊಂದು ಪತ್ರಿಕೆಯಲ್ಲಿ ಭಾಷಾ ವಿಷಯಗಳು ಇರಲಿವೆ.

ಜೊತೆಗೆ ಇದು ಬಹು ಆಯ್ಕೆ ಪ್ರಶ್ನೆಗಳನ್ನು(Multiple choice questions)ಒಳಗೊಂಡಿರಲಿದ್ದು, ಸರಳ ಹಾಗೂ ನೇರ ಪ್ರಶ್ನೆಗಳಿರಲಿವೆ.

ಗ್ರೇಡ್​ ಆಧಾರಿತ ಫಲಿತಾಂಶ. A, A+ ಮಾದರಿಯಲ್ಲಿ ಗ್ರೇಡ್​ ವ್ಯವಸ್ಥೆ ಇರಲಿದ್ದು, ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಒಂದು ವೇಳೆ 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಣೆ- ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಆಗದಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದು, ಒಟ್ಟು ಆರು ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲ್ಲಿದೆ.

ಒಂದು ಕೊಠಡಿಯಲ್ಲಿ 10-12 ವಿದ್ಯಾರ್ಥಿಗಳನ್ನು ಕೂರಿಸಿ ಪರೀಕ್ಷೆ ಮಾಡಲಿದ್ದು, ಎಸ್​​ಎಸ್​ಎಲ್​ಸಿ ಪರೀಕ್ಷೆ ನಡೆಯುವ ಕೊಠಡಿ ಮೇಲ್ವಿಚಾರಕರು ಕೊರೊನಾ ಲಸಿಕೆ ಪಡೆದಿರಬೇಕು ಎಂಬ ನಿಯಮ ಮಾಡಲಾಗಿದೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.