ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಎಸ್ಎಸ್ಎಲ್​ಸಿ ಪರೀಕ್ಷೆ: ಮುಖ್ಯಮಂತ್ರಿ ಮಹತ್ವದ ಹೇಳಿಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.

ಪರೀಕ್ಷೆ ನಡೆಸುವ ವಿಚಾರವಾಗಿ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಇನ್ನೂ ಒಂದೂವರೆ ಎರಡು‌ ತಿಂಗಳ ನಂತರ ಕೊರೊನಾ ನಿಯಂತ್ರಣಕ್ಕೆ ಬಂದರೆ ಪರೀಕ್ಷೆ ನಡೆಸುವ ತೀರ್ಮಾನ ಮಾಡುತ್ತೇವೆ. ಮಕ್ಕಳಿಗೆ ಏನೂ ತೊಂದರೆ ಆಗುವುದಿಲ್ಲ. ಪೋಷಕರು ಕೂಡ ಗೊಂದಲಕ್ಕೆ ಒಳಗಾಗುವುದು ಬೇಡ ಎಂದರು.

ಈಗಾಗಲೇ ನಾನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆಗೆ ಮಾತನಾಡಿದ್ದೇನೆ. ಇನ್ನೂ ಕೆಲವು ದಿನಗಳ ನಂತರ ಪರೀಕ್ಷೆ ನಡೆಸುವುದಾಗಿ ಹೇಳಿದ್ದಾರೆ. ಪರಿಸ್ಥಿತಿ ಸುಧಾರಣೆ ಆದರೆ ಎರಡು ದಿನಗಳಲ್ಲಿ ಎಲ್ಲಾ ಪರೀಕ್ಷೆ ಮುಗಿಸಬಹುದು ಎಂದಿದ್ದಾರೆ ಎಂದು ಸಿಎಂ ಹೇಳಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.