ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಮಾನಸಿಕ ಒತ್ತಡ ನಿರ್ವಹಣೆ ಹಾಗೂ ಆರೋಗ್ಯ ಬಗ್ಗೆ ವೆಬಿನಾರ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಐಕ್ಯೂಎಸಿ ಸೆಲ್ ಇದರ ಆಶ್ರಯದಲ್ಲಿ  ಇತ್ತೀಚೆಗೆ ಗೂಗಲ್ ಮೀಟ್ ಆನ್‌ಲೈನ್ ಪ್ಲಾಟ್‌ಫಾರ್ಮ್‌ನಲ್ಲಿ ಮಾನಸಿಕ ಒತ್ತಡ ನಿರ್ವಹಣೆ ಬಗ್ಗೆ ವೆಬ್‌ನಾರ್‌ರನ್ನು ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಆಪ್ತ ಸಮಾಲೋಚಕರಾದ ಸ್ಟೀವನ್ ಡಿಸೋಜಾ ಅವರು ಮಾನಸಿಕ ಸಮಸ್ಯೆಗಳು ಹಾಗೂ ಒತ್ತಡ ನಿರ್ವಹಣೆಯ ವಿಧಾನಗಳನ್ನು ತಿಳಿಸಿದರು. ನಮ್ಮ ಗುರಿಯನ್ನು ಸಾಧಿಸುವಾಗ ಬರುವ ಅಡೆತಡೆ-ಸವಾಲುಗಳನ್ನು ಹೇಗೆ ನಿವಾರಿಸುವುದು ಎಂಬುದರ ಕುರಿತು ಉಪನ್ಯಾಸ ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಜೋಸೆಫ್ ಎನ್.ಎಂ. ಅವರು ಕಾರ್ಯಕ್ರಮ ಆಯೋಜಿಸಿದ್ದ ಎನ್.ಎಸ್.ಎಸ್ ಘಟಕಕ್ಕೆ ಅಭಿನಂದಿಸಿದರು.
ಈ ಕಾರ್ಯಕ್ರಮಕ್ಕೆ ಎನ್.ಎಸ್.ಎಸ್. ನ 120 ಸ್ವಯಂಸೇವಕ-ಸೇವಕಿಯರು ಭಾಗವಹಿಸಿದ್ದರು. ಜೊತೆಗೆ ಕಾಲೇಜಿನ ಶಿಕ್ಷಕರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರನ್ನು ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿಯಾದ ಪ್ರಶಾಂತ್ ಎಂ. ಸ್ವಾಗತಿಸಿದರು. ಎನ್‌ಎಸ್‌ಎಸ್ ಘಟಕದ ಸ್ವಯಂಸೇವಕಿ ಹಮ್ಸಿಕಾ ಇವರು ಧನ್ಯವಾದ ಕೋರಿದರು. ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿಯಾದ ರಾಬಿನ್ ಜೋಸೆಫ್ ಸೆರಾ ಇವರು ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.