ಮೂಡುಕೋಡಿಯ ಪಡಿತರ ವಿತರಣಾ ಕೇಂದ್ರಕ್ಕೆಶಾಸಕರಿಂದ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅವ್ಯವಸ್ಥೆಯ ಪಡಿತರ ವಿತರಣೆಗೆ ಶಾಸ್ವತ ಪರಿಹಾರ ಶ್ಲಾಘನೀಯ: ಹರೀಶ್ ಪೂಂಜ

ವೇಣೂರು:  ಸರಕಾರದಿಂದ ಸಿಗುವ ಪಡಿತರ ವಿತರಣೆ ವ್ಯವಸ್ಥೆಯನ್ನು ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘವು ವ್ಯವಸ್ಥಿತವಾಗಿ ನಿರ್ವಹಿಸಿಕೊಂಡು ಬಂದಿದೆ. ಸಂಚಾರಿ ವ್ಯವಸ್ಥೆಯಲ್ಲಿದ್ದ ಮೂಡುಕೋಡಿಯ ಪಡಿತರ ವ್ಯವಸ್ಥೆಗೆ ಕೋವಿಡ್‌ನ ಈ ಸಂದರ್ಭದಲ್ಲೇ ಶಾಸ್ವತ ಪರಿಹಾರ ಕಲ್ಪಿಸಿರುವುದು ಶ್ಲಾಘನೀಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಮೂಡುಕೋಡಿಯಲ್ಲಿ ನಿರ್ಮಿಸಲಾದ ಪಡಿತರ ವಿತರಣಾ ಕೇಂದ್ರಕ್ಕೆ  ಜೂ.9ರಂದು ಚಾಲನೆ ನೀಡಿ ಅವರು ಮಾತನಾಡಿ, ಪಡಿತರ ವಿತರಣೆ ವ್ಯವಸ್ಥೆಯನ್ನು ಕೋವಿಡ್ ಸಂದರ್ಭದಲ್ಲಿ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಗ್ರಾ.ಪಂ. ಸದಸ್ಯರು ಸ್ವಯಂ ಸೇವಕರಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.
ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮಸ್ಥರ ಆರ್ಥಿಕ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಮೂಡುಕೋಡಿಯಲ್ಲಿ ಸಂಘದ ಶಾಖೆ ತೆರೆಯಲು ಶ್ರಮವಹಿಸಲಾಗುವುದು ಎಂದರು.
ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ಕಟ್ಟಡ ಮಾಲಕ ರಾಜಗೋಪಾಲ ಭಟ್, ನಾರಾವಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ ಅಂಡಿಂಜೆ, ತಾಲೂಕು ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾದ ಅಧ್ಯಕ್ಷ ಅರುಣ್ ಕ್ರಾಸ್ತ, ಮೂಡುಕೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ಭಟ್, ಸಂಘದ ನಿರ್ದೇಶಕರು, ವೇಣೂರು ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಪ್ರಾಸ್ತಾವಿಸಿ, ಸ್ವಾಗತಿಸಿದರು. ವೇಣೂರು ಗ್ರಾ.ಪಂ. ಸದಸ್ಯ ಉಮೇಶ್ ನಡ್ತಿಕಲ್ಲು ನಿರೂಪಿಸಿ, ಪಂ. ಸದಸ್ಯ ಅನೂಪ್ ಜೆ. ಪಾಯಿಸ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.