ಉಜಿರೆ: ಗ್ರಾಮ ಪಂಚಾಯತ್ ಮಟ್ಟದ ಟಾಸ್ಕ್ ಪೋರ್ಸ್ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಗ್ರಾಮ ಪಂಚಾಯತ್ ಮಟ್ಟದ ಟಾಸ್ಕ್ ಪೋರ್ಸ್ ಸಭೆ ಜೂ.10 ರಂದು  ಪಂಚಾಯತ್ ಸುವರ್ಣ ಸೌಧ ಸಭಾ ಭವನದಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ವಾರ್ಡ್ ಮಟ್ಟದಲ್ಲಿ ದಾಖಲಾದ ಪ್ರಕರಣಗಳು, ಸೋಂಕು ನಿಯಂತ್ರಣಕ್ಕೆ ಕೈ ಗೊಂಡ ಕ್ರಮಗಳ ಬಗ್ಗೆ ಹಾಗೂ ವೈದ್ಯರ ನಡೆ ಹಳ್ಳಿ ಕಡೆಗೆ ಕ್ರಮದ ಕುರಿತು ಚರ್ಚಿಸಲಾಯಿತು.

ಇದೇ ವೇಳೆ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೊಸದಾಗಿ ಬಂದ ಡಾ.ಅಕ್ಷತರಾಜ್ ಇವರು ಉಪಸ್ತಿರಿದ್ದರು. ಇವರನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಹೂಗುಚ್ಚ ನೀಡಿ ಉಜಿರೆ ಗ್ರಾಮದ ಪರವಾಗಿ ಸ್ವಾಗತಿಸಿದರು.

ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಚನಾ, ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಜಯಂತ್ ಯು. ಬಿ. ಗ್ರಾಮ ಕರಣಿಕ ಪ್ರದೀಪ್, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಹಾಯಕರು, ಶಾಲೆಯ ಮುಖ್ಯೋಪಧ್ಯಾಯರು, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.