ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ವಾರ್ಡ್ ಸಮಿತಿ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೊರೊನಾ ಸೋಂಕು ಪ್ರಕರಣಗಳನ್ನು ಸ್ಥಳದಲ್ಲಿಯೇ ಪತ್ತೆ ಹಚ್ಚಿ, ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ವೈದ್ಯರ ನಡೆ ಹಳಿ ಕಡೆ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ವಾರ್ಡ್ ಮಟ್ಟದ  ಸಭೆಯು ಜೂ.11 ರಂದು  ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ  ಜರುಗಿತು.

ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋವಿಡ್ 19 ತಾಲೂಕು ನೋಡೆಲ್ ಅಧಿಕಾರಿ ವೆಂಕಟೇಶ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ತಾಲೂಕಿನಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿರುವಂತಹ ಹಿನ್ನೆಲೆಯಲ್ಲಿ ವೈದ್ಯರ ನಡೆ ಹಳಿ ಕಡೆ ಕಾರ್ಯಕ್ರಮದ ಅಂಗವಾಗಿ ಫಾದರ್ ಮುಲ್ಲರ್ಸ್ ಆಸ್ಪತ್ರೆ ಮಂಗಳೂರು ಇಲ್ಲಿನ ವೈದ್ಯಕೀಯ ತಂಡ ಮನೆ ಮನೆಗೆ ಭೇಟಿ ನೀಡುವ ವೇಳೆ ಪಟ್ಟಣದ ಎಲ್ಲಾ ನಾಗರಿಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕು.

ಲಾಕ್ ಡೌನ್ ಜಾರಿಯಾಗಿರುವ ಈ ಅವಧಿಯಲ್ಲಿ  ಪಟ್ಟಣ ಪಂಚಾಯತ್  ವ್ಯಾಪ್ತಿಯಲ್ಲಿ  ವ್ಯಾಪಾರ ವಹಿವಾಟು ಮಾಡುತ್ತಿರುವ ಪ್ರತಿ ಅಂಗಡಿ ಮಾಲಕರು ಹಾಗೂ ನೌಕರರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಅಗತ್ಯ ಮೈಕ್ರೋ ಪ್ಲಾನ್ ತಯಾರಿಸುವಂತೆ ಆರೋಗ್ಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಈ ಪರೀಕ್ಷಾ ಕ್ಯಾಂಪುಗಳಿಗೆ ಚುನಾಯಿತ ಸದಸ್ಯರು ಸಹಕಾರ ನೀಡಬೇಕು ಹಾಗೂ ಪಟ್ಟಣದಲ್ಲಿ ಅನಗತ್ಯ ತಿರುಗಾಡುತ್ತಿರುವ ಜನರನ್ನು ತಡೆದು ಪರಿಶೀಲಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮಹೇಶ್ ಜೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ನ.ಪಂ ಸದಸ್ಯರು,  ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳು, ಪಟ್ಟಣ ಪಂಚಾಯತ್ ಸಿಬ್ಬಂದಿವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.