ಸುಲ್ಕೇರಿ: ಗ್ರಾ.ಪಂ. ವ್ಯಾಪ್ತಿಯ ಆಶಾ ಕಾರ್ಯಕರ್ತೆಯ ಜೊತೆ ಸಿಎಂ ಸಂವಾದ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ಲಾಘಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಿಂದ ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಕೊಂಡಾಡಿದ ಸಿಎಂ, ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಗಮನಿಸಿ, ಕೋವಿಡ್ 19 ಎರಡನೇ ಅಲೆಯ ಪರಿಹಾರ ಪ್ಯಾಕೇಜ್ ಅಡಿ 3 ಸಾವಿರ ರೂ. ಸಹಾಯಧನ ಘೋಷಿಸಿರುವುದಾಗಿ ತಿಳಿಸಿದರು.

ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದಲ್ಲಿ ತಾಲೂಕಿನ ಸುಲ್ಕೇರಿ ಗ್ರಾಮದ ಆಶಾ ಕಾರ್ಯಕರ್ತೆ ಹೇಮಲತಾ ಅವರೊಂದಿಗೆ ಮುಖ್ಯಮಂತ್ರಿಗಳು ಅವರು ಮಾತನಾಡಿದ್ದು, ಆರೋಗ್ಯದ ಸ್ಥಿತಿ ಗತಿ, ಕಾರ್ಯ ನಿರ್ವಹಣೆ, ಅವರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ವಿವರ, ಸಾರ್ವಜನಿಕರು, ಮೇಲಾಧಿಕಾರಿಗಳ ಸಹಕಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.

ಇದೇ ವೇಳೆ ತಮ್ಮ ಕಾರ್ಯಾನುಭವ ಹಂಚಿಕೊಂಡ ಹೇಮಲತಾ ಅವರು ಕೋವಿಡ್ ನಿರ್ವಹಣೆಯ ಸಂದರ್ಭದಲ್ಲಿ ಮೊದಲಿಗೆ ಸಾರ್ವಜನಿಕರು ಭಯಭೀತರಾಗಿದ್ದರು. ಪರೀಕ್ಷೆ ಮಾಡಿಸಲು, ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದರು. ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರ್​​​ಗಳಿಗೆ ದಾಖಲಾಗಲು ಭಯ ಪಡುತ್ತಿದ್ದರು. ಆದರೆ, ಇದೀಗ ಸಹಕರಿಸುತ್ತಿದ್ದಾರೆ. ಲಸಿಕೆ ಹಾಕಿಸಲು ತಮ್ಮ ಗ್ರಾಮದ ಜನರ ಮನವೊಲಿಸಿ, ಮೇಲಧಿಕಾರಿಗಳ ಸಹಾಯದಿಂದ ವಾಹನ ವ್ಯವಸ್ಥೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಲಾಗುತ್ತಿದೆ ಎಂದು  ತಮ್ಮ ಅನುಭವಗಳನ್ನು ಹಂಚಿಕೊಂಡರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.