ಸುಲ್ಕೇರಿ: ಗ್ರಾ.ಪಂ ವ್ಯಾಪ್ತಿಯ ಆರೋಗ್ಯ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ಕಿಟ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಣ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕೊರೋನಾ ನಿಯಂತ್ರಣ ಸಭೆಯು ಜೂನ್ 11 ರಂದು ಗ್ರಾ.ಪಂ ಸಭಾಂಗಣದಲ್ಲಿ ಜರುಗಿತು.

ಗ್ರಾ.ಪಂ ಅಧ್ಯಕ್ಷ  ನಾರಾಯಣ ಪೂಜಾರಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಕೋವಿಡ್ ಆರೋಗ್ಯ ಬಿಕ್ಕಟ್ಟಿನ ಈ ಸಂಕಷ್ಟದ ವೇಳೆಯಲ್ಲಿ ತಮ್ಮ ಜೀವದ ಹಂಗು ತೊರೆದು ಕೋವಿಡ್ ಕಾರ್ಯಪಡೆ ಮೂಲಕ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಸಹಾಯಕಿಯರಿಗೆ, ಆಶಾಕಾರ್ಯಕರ್ತರಿಗೆ ಪಂಚಾಯತ್ ವತಿಯಿಂದ ಕೋವಿಡ್ ಕಿಟ್ ವಿತರಿಸಲಾಗಿದೆ.

ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶ್ರೀ ರವಿ ಬನಪ್ಪ ಗೌಡ್ರ, ಕಾರ್ಯದರ್ಶಿ ಕೊರಗಪ್ಪ ನಾಯ್ಕ , ಗ್ರಾ.ಪಂ ಸದಸ್ಯರು, ಆರೋಗ್ಯ ಸಹಾಯಕರು,ಆಶಾ ಕಾರ್ಯಕರ್ತೆಯರು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.