‘ಸುದ್ದಿ’ ಫಲಶ್ರುತಿ” ಬೆಳ್ತಂಗಡಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಶಾಸಕರ ಕಡೆಯಿಂದ ಆ್ಯಂಡ್ರಾಯ್ಡ್ ಮೊಬೈಲ್ ಕೊಡುಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

‘ಸುದ್ದಿ ಜನಸೇವೆಯ ಅನಾವರಣ’ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ‘ಸುದ್ದಿ’ ಮಾಧ್ಯಮದ ಮೂಲಕ ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ನಡೆಯುತ್ತಿರುವ ‘ಜನಾಧಿಕಾರ’ ಮತ್ತು ‘ಜನಸೇವೆಯ ಅನಾವರಣ’ ಕಾರ್ಯಕ್ರಮದ ಭಾಗವಾಗಿ ಜೂನ್.13ರಂದು ಬೆಳ್ತಂಗಡಿ ತಾಲೂಕಿನ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಧ್ವನಿಯಾಗುವ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ಭಾರತಿ ಹಾಗೂ ಕಾರ್ಯದರ್ಶಿ ರೇಣುಕಾ ಅವರು ಭಾಗವಹಿಸಿ ಆಶಾ ಕಾರ್ಯಕರ್ತೆಯರ ಕಾರ್ಯವೈಖರಿ, ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಈ ಕಾರ್ಯಕ್ರಮದಲ್ಲಿ ಹಂಚಿಕೊಂಡರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರೀಶ್ ಪೂಂಜ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಗೆ ತಾಲೂಕಿನ ಆಶಾ ಕಾರ್ಯಕರ್ತೆಯರ ಸಮಸ್ಯೆ ಹಾಗೂ ಬೇಡಿಕೆಗಳನ್ನು ನೇರವಾಗಿ ಶಾಸಕರ ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ತಾನು ಹಲವಾರು ಸಂದರ್ಭಗಳಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಧ್ವನಿಯಾಗುವ ಕೆಲಸವನ್ನು ಈ ಹಿಂದೆಯೂ ಮಾಡಿದ್ದೇನೆ. ಮತ್ತು ಕೊರೊನಾ ಪ್ರಥಮ ಅಲೆಯ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ಒದಗಿಸುವ ಕಾರ್ಯವೂ ಇಲ್ಲಿ ನಡೆದಿತ್ತು ಮತ್ತು ವಿಧಾನ ಸಭೆಯಲ್ಲೂ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಧ್ವನಿಯಾಗುವ ಪ್ರಯತ್ನವನ್ನು ತಾನು ಮಾಡಿದ್ದೇನೆ ಎಂದು ಹೇಳಿದರಲ್ಲದೆ, ಸುದ್ದಿ ಬಳಗ ನಡೆಸುತ್ತಿರುವ ಈ ಕಾರ್ಯಕ್ರಮದ ಮೂಲಕ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ‘ಗುಡ್ ನ್ಯೂಸ್’ ನೀಡುತ್ತಿದ್ದೇನೆ ಎಂದು ಹೇಳಿದ ಶಾಸಕ ಹರೀಶ್ ಪೂಂಜ ಅವರು, ಆಶಾ ಕಾರ್ಯಕರ್ತೆಯರ ಫೀಲ್ಡ್ ವರ್ಕ್ ಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೀಘ್ರದಲ್ಲೇ ಆ್ಯಂಡ್ರಾಯ್ಡ್ ಮೊಬೈಲನ್ನು ಶಾಸಕರ ಕಛೇರಿಯಿಂದ ಒದಗಿಸಲಾಗುತ್ತದೆ ಎಂದು ಹೇಳಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.